ಕೊರೋನಾ ಅನಾಹುತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ

ಸಂಭನೀಯ ಕೊರೋನಾ ಮೂರನೆ ಅಲೆ ರಾಜ್ಯವನ್ನು ಕಾಡದಂತೆ ಸೂಕ್ತ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಆಗ್ರಹಪಡಿಸಿದ್ದಾರೆ.
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಕಾರವಾರ: ಸಂಭನೀಯ ಕೊರೋನಾ ಮೂರನೆ ಅಲೆ ರಾಜ್ಯವನ್ನು ಕಾಡದಂತೆ ಸೂಕ್ತ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಆಗ್ರಹಪಡಿಸಿದ್ದಾರೆ.

ಕಾರವಾರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೆರೆಯ  ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಮೂರನೆ ಅಲೆ ಈಗಾಗಲೇ ಬಂದಿದ್ದು ಸೋಂಕು ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಪ್ರಮಾಣ ಹೆಚ್ಚಾಗಿರುತ್ತದೆ ಹಾಗಾಗಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದರು.

ಕೇರಳದಿಂದ ರಾಜ್ಯದ ಕರಾವಳಿ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಹೆಚ್ಚು ಜನ ಬರುತ್ತಾರೆ, ರಾಜ್ಯದ ಗಡಿಗಳಲ್ಲಿ ಅವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಎರಡು ಡೋಸ್ ಲಸಿಕೆ ಪಡೆಯದವರನ್ನು ಗಡಿ ಒಳಗೆ ಬಿಡಬಾರದು ಹಾಗೂ ಪರೀಕ್ಷೆ ನಡೆಸಿ ನೆಗೆಟಿವ್ ಬಂದವರನ್ನು ಮಾತ್ರ ಒಳಗೆ ಬಿಡಬೇಕು ಎಂದರು. 

ಈಗಾಗಲೇ ನಾವು ಸಾಕಷ್ಟುಸಂಕಷ್ಟ ಅನುಭವಿಸಿದ್ದೇವೆ. ಸೂಕ್ತ ಆಸ್ಪತ್ರೆ, ಹಾಸಿಗೆಗಳು, ವೆಂಟಿಲೇಟರ್, ಆಕ್ಸಿಜನ್ ಇಲ್ಲದೆ ಸಾವಿರಾರು ಜನ ಸಾವಿಗೀಡಾಗಿದ್ದಾರೆ, ಇದು ಮತ್ತೆ ಮರುಕಳಿಸದಂತೆ ತಡೆಯಬೇಕು. ಇದನ್ನು ಬಿಟ್ಟು ಮುಖ್ಯಮಂತ್ರಿಗಳು ಮಂತ್ರಿಮಂಡಲ ರಚನೆಗೆ ಓಡಾಡುತ್ತಿದ್ದಾರೆ. ಒಮ್ಮೆ ದೆಹಲಿಗೆ ಹೋಗಲಿ, ಪದೇ ಪದೇ ಹೋಗುವ ಅಗತ್ಯವೇನಿದೆ? ಬಿಜೆಪಿ ಹೈಕಮಾಂಡ್ ಕೂಡ ರಾಜ್ಯದ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com