ಬೊಮ್ಮಾಯಿ ಸಂಪುಟದಲ್ಲಿ ವಿಜಯೇಂದ್ರಗೆ ಇಲ್ಲ ಸ್ಥಾನ: ಲಕ್ಷ್ಮಣ ಸವದಿ, ಶೆಟ್ಟರ್ ಸೇರಿ 6 ಸಚಿವರಿಗೆ ಕೊಕ್
ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Published: 04th August 2021 12:03 PM | Last Updated: 04th August 2021 12:16 PM | A+A A-

ಸುರೇಶ್ ಕುಮಾರ್
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ, ವಿಜಯೇಂದ್ರ ಹೆಸರು ಈಗಿನ ಪಟ್ಟಿಯಲ್ಲಿ ಇಲ್ಲ. 29 ಶಾಸಕರು ಹೆಸರುಗಳು ಪಟ್ಟಿಯಲ್ಲಿ ಇವೆ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮುಖಂಡರಾದ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದಾರೆ. ರಾಜ್ಯದ ಉಸ್ತುವಾರಿ ಹೊತ್ತಿರುವ ಅರುಣ್ ಸಿಂಗ್ ವಿಜಯೇಂದ್ರ ಅವರೊಂದಿಗೆ ಮಾತನಾಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಇದರ ಜೊತೆಗೆ ಬಿಎಸ್ ವೈ ಸಂಪುಟದಲ್ಲಿ ಕಾರ್ಯ ನಿರ್ವಹಸಿದ್ದ ಆರು ಸಚಿವರಿಗೆ ಕೊಕ್ ನೀಡಲಾಗಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಸಿಪಿ ಯೋಗೇಶ್ವರ್, ಅರವಿಂದ ಲಿಂಬಾವಳಿ, ಶ್ರೀಮಂತ ಪಾಟೀಲ್ ಮತ್ತು ಶಂಕರ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಇದರ ಜೊತೆಗೆ ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯಗೆ ಮತ್ತೆ ನಿರಾಸೆಯಾಗಿದೆ.