ಕೆಪಿಸಿಸಿ ಪುನಾರ್ರಚನೆ: ದೆಹಲಿಗೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಲು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಇದೇ ವೇಳೆ ಕೆಪಿಸಿಸಿ ಪುನಾರ್ರಚನೆ ಕುರಿತು ಚರ್ಚೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.
Published: 04th August 2021 07:59 AM | Last Updated: 04th August 2021 07:59 AM | A+A A-

ಡಿಕೆ.ಶಿವಕುಮಾರ್
ಬೆಂಗಳೂರು: ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಲು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಇದೇ ವೇಳೆ ಕೆಪಿಸಿಸಿ ಪುನಾರ್ರಚನೆ ಕುರಿತು ಚರ್ಚೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಪ್ರತಿಕ್ರಿಯೆ ನೀಡಿ, ಡಿಕೆ ಶಿವಕುಮಾರ್ ಅವರು ಕರ್ನಾಟಕದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಪಕ್ಷದ ಸಂಘಟನೆ ಕುರಿತ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆಂದು ಹೇಳಿದ್ದಾರೆ.
ಮುಂಬರುವ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಲು ಆರಂಭಿಸಿದೆ. ಇದರಂತೆ ಸುರ್ಜೇವಾಲಾ ಅವರು ಕೆಲ ದಿನಗಳಿಂದ ತುಮಕೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಸ್ಥಳೀಯ ಸಂಸ್ಥೆಗಳು ಮತ್ತು ವಿಧಾನ ಪರಿಷತ್ ಸ್ಥಾನಗಳಿಗೆ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದೆ.
ಈ ನಡುವೆ ನಿನ್ನೆ ರಾಜಸ್ಥಾನದ ಜೈಪುರಕ್ಕೂ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದಷ್ಟೇ ಅಲ್ಲೆ, ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಕುಮಾರಿ ಸೆಲ್ಜಾ ಕೂಡ ಗೆಹ್ಲೋಟ್ ಅವರನ್ನು ಬೇಟಿ ಮಾಡಿದರು. ಈ ಬೆಳವಣಿಗೆಯೂ ಇದೀಗ ಹಲವು ಕುತೂಹಲಗಳನ್ನು ಕೆರಳಿಸಿದೆ.