ರಾಜಕೀಯ ಜೀವನದಲ್ಲಿ ಏಳು-ಬೀಳುಗಳನ್ನು ಕಂಡಿದ್ದೇನೆ, ಸಚಿವ ಸ್ಥಾನ ನೀಡಿದರೆ ಕೆಲಸ ಮಾಡುತ್ತೇನೆ: ಸಿ.ಪಿ. ಯೋಗೇಶ್ವರ್
ಸಚಿವ ಸ್ಥಾನ ನೀಡುವುದು, ಬಿಡುವುದು ಹೈಕಮಾಂಡ್ ನಿರ್ಧಾರ, ಪಕ್ಷ ಸಚಿವ ಸ್ಥಾನ ನೀಡಿದರೆ ಕೆಲಸ ಮಾಡುತ್ತೇನೆ, ಇಲ್ಲದಿದ್ದರೆ ಕಾರ್ಯಕರ್ತನಾಗಿ ಮುಂದುವರಿದು ಕೆಲಸ ಮಾಡುತ್ತೇನೆ ಎಂದು ಶಾಸಕ ಸಿ ಪಿ ಯೋಗೇಶ್ವರ್ ಹೇಳಿದ್ದಾರೆ.
Published: 04th August 2021 10:19 AM | Last Updated: 04th August 2021 01:30 PM | A+A A-

ಸಿ ಪಿ ಯೋಗೇಶ್ವರ್
ದೇವನಹಳ್ಳಿ: ಸಚಿವ ಸ್ಥಾನ ನೀಡುವುದು, ಬಿಡುವುದು ಹೈಕಮಾಂಡ್ ನಿರ್ಧಾರ, ಪಕ್ಷ ಸಚಿವ ಸ್ಥಾನ ನೀಡಿದರೆ ಕೆಲಸ ಮಾಡುತ್ತೇನೆ, ಇಲ್ಲದಿದ್ದರೆ ಕಾರ್ಯಕರ್ತನಾಗಿ ಮುಂದುವರಿದು ಕೆಲಸ ಮಾಡುತ್ತೇನೆ ಎಂದು ಶಾಸಕ ಸಿ ಪಿ ಯೋಗೇಶ್ವರ್ ಹೇಳಿದ್ದಾರೆ.
ಹಿಂದಿನ ಬಿ ಎಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ಬಂಡಾಯವೆದ್ದು ಸುದ್ದಿಯಾಗಿದ್ದ ಸಿ ಪಿ ಯೋಗೇಶ್ವರ್ ದೆಹಲಿಗೆ ಹೋಗಿದ್ದರು. ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾದ ಬಳಿಕ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ನನಗೆ ಏನೂ ಮಾಹಿತಿಯಿಲ್ಲ, ನನಗೆ ಯಾರಿಂದಲೂ ಕರೆ ಬಂದಿಲ್ಲ, ನೋಡೋಣ ಮುಂದೆ ಏನಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದರು.
ರಾಜಕೀಯದಲ್ಲಿ ಏಳು-ಬೀಳುಗಳು ಸಹಜ, ಹಲವು ಏಳು-ಬೀಳುಗಳನ್ನು ಜೀವನದಲ್ಲಿ ಕಂಡಿದ್ದೇನೆ ಮತ್ತು ಅನುಭವಿಸಿದ್ದೇನೆ ಎಂದರು.