ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿಯೂ ಬೇಕು: ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಸಚಿವರ ಹೇಳಿಕೆ

ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶದಿಂದ ಕರ್ನಾಟಕವು ಕೈಗೆತ್ತಿಕೊಳ್ಳಲುದ್ದೇಶಿಸಿರುವ ಮೇಕೆದಾಟು ಯೋಜನೆಗೆ ಕಾವೇರಿ ಕೊಳ್ಳದ ಇತರೆ ರಾಜ್ಯಗಳ ಅನುಮತಿ ಕಡ್ಡಾಯ, ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ನೀಡಿದ ಹೇಳಿಕೆ ರಾಜ್ಯದ ಆತ್ಮವಿಶ್ವಾಸ ಕುಗ್ಗುವಂತೆ ಮಾಡಿದೆ.
ಗಜೇಂದ್ರ ಸಿಂಗ್ ಶೇಖಾವತ್
ಗಜೇಂದ್ರ ಸಿಂಗ್ ಶೇಖಾವತ್

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶದಿಂದ ಕರ್ನಾಟಕವು ಕೈಗೆತ್ತಿಕೊಳ್ಳಲುದ್ದೇಶಿಸಿರುವ ಮೇಕೆದಾಟು ಯೋಜನೆಗೆ ಕಾವೇರಿ ಕೊಳ್ಳದ ಇತರೆ ರಾಜ್ಯಗಳ ಅನುಮತಿ ಕಡ್ಡಾಯ, ಜತೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿಯೂ ಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ನೀಡಿದ ಹೇಳಿಕೆ
ರಾಜ್ಯದ ಆತ್ಮವಿಶ್ವಾಸ ಕುಗ್ಗುವಂತೆ ಮಾಡಿದೆ.

ಮೇಕೆದಾಟು ಯೋಜನೆ ಸ್ಥಿತಿಗತಿ ಕುರಿತು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಗುರುವಾರ ಲೋಕಸಭೆಯಲ್ಲಿ ಎತ್ತಿದ ಪ್ರಶ್ನೆಗೆ ಅವರು ಈ ಉತ್ತರ ನೀಡಿದ್ದಾರೆ. ಕರ್ನಾಟಕ ಸಲ್ಲಿಸಿದ್ದ ಮೇಕೆದಾಟು ಸಮಗ್ರ ಯೋಜನಾ ವರದಿಗೆ ಷರತ್ತು ಬದ್ಧ ಅನುಮತಿ ನೀಡಿದ್ದೇವೆ. ಆದರೆ, ಇದು ಅಂತಾರಾಜ್ಯ ಯೋಜನೆ ಆಗಿರುವ ಕಾರಣ ಕಾವೇರಿ ಕಣಿವೆ ರಾಜ್ಯಗಳಾದ ತಮಿಳುನಾಡು, ಕೇರಳ, ಪುದುಚೇರಿ ಅನುಮತಿ ಬೇಕು. ರಾಜ್ಯವು ಯೋಜನಾ ವರದಿ(ಡಿಪಿಆರ್‌) ಕೊಟ್ಟಾಗಲೇ ಇದನ್ನು ಸ್ಪಷ್ಟವಾಗಿ ತಿಳಿಸಿದ್ದೆವು. ಯೋಜನೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಕೂಡ ಕಡ್ಡಾಯ. ಜತೆಗೆ ಈ ಯೋಜನೆಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಸಮ್ಮತಿ ಇನ್ನೂ ಸಿಕ್ಕಿಲ್ಲ ಎಂದ ಕೇಂದ್ರ ಸಚಿವ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.

ಯೋಜನೆಗೆ ಅನುಮತಿಯನ್ನು 6 ತಿಂಗಳ ಒಳಗೆ ನೀಡಿಲ್ಲವಾದರೆ ಕೇಂದ್ರ ಸಮ್ಮತಿ ನೀಡಿದೆ ಎಂದೇ ಭಾವಿಸಲಿದೆ ಎಂದು ಕರ್ನಾಟಕ ತಿಳಿಸಿತ್ತಲ್ವಾ? ಎಂಬ ವಿಚಾರವನ್ನು ಪ್ರಜ್ವಲ್‌ ಅವರು ಸಚಿವರ ಗಮನಕ್ಕೆ ತಂದಾಗ, ಸಮ್ಮತಿ ಇದೆ ಎಂದು ಕರ್ನಾಟಕ ಭಾವಿಸಿದರೂ ಅದನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತಿಳಿಸಬೇಕು ಮತ್ತು ಪ್ರಾಧಿಕಾರದ ಅನುಮತಿಯೂ ಬೇಕು ಎಂದಿದ್ದಾರೆ. ಯೋಜನೆಗೆ ಪರಿಸರ ಮತ್ತು ಅರಣ್ಯ ಇಲಾಖೆಗೆ ಪರಿಶೀಲನೆ ನಡೆಸಿ ಎಂದು ತಿಳಿಸಿದ್ದೇವೆ. ಅಲ್ಲಿಂದ ದಾಖಲೆ ಬರಬೇಕಷ್ಟೆ ಎಂದು ಈ ಸಂದರ್ಭದಲ್ಲಿ ಶೇಖಾವತ್‌ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com