2023ರಲ್ಲಿ ಬಿಜೆಪಿಯಿಂದ ರಾಷ್ಟ್ರೀಯವಾದಿ ವ್ಯಕ್ತಿಯೊಬ್ಬರು ಕರ್ನಾಟಕದ ಸಿಎಂ ಆಗುತ್ತಾರೆ: ಕೆ.ಎಸ್. ಈಶ್ವರಪ್ಪ

ಮುಂದಿನ ಬಾರಿ ಬಿಜೆಪಿಯಿಂದ ರಾಷ್ಟ್ರವಾದಿ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. 
ಈಶ್ವರಪ್ಪ
ಈಶ್ವರಪ್ಪ

ಮೈಸೂರು: ಮುಂದಿನ ಬಾರಿ ಬಿಜೆಪಿಯಿಂದ ರಾಷ್ಟ್ರವಾದಿ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.

ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ಗುರುವಾರ ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತದೆ. ಆಗ ಜಾತಿ ವಿಚಾರ ಬರುವುದಿಲ್ಲ. ರಾಷ್ಟ್ರವಾದಿಯೊಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲ ಅಂತ ಬಿಂಬಿಸಲಾಗಿತ್ತು. ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಅಂತ ಈಗ ಎಲ್ಲರಿಗೂ ಗೊತ್ತಾಗಿದೆ ಎಂದರು.

ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಸವರಾಜ ಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರೇ ಹಸಿವಿನಿಂದ ಒದ್ದಾಡುತ್ತಿರುವ ಇಲಿ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಹುಲಿಯಾಗುತ್ತಾರೆ ಅಂದುಕೊಂಡಿದ್ದೆವು. ಆದರೆ ಅವರು ಇಲಿಯಾಗಿ ವಿಲ ವಿಲ‌ ಒದ್ದಾಡುತ್ತಿದ್ದಾರೆ. ಅವರು ರಾಜ್ಯಕ್ಕೆ ಹುಲಿಯಾಗುವ ಬದಲು ಡಿ.ಕೆ.ಶಿವಕುಮಾರ್ ಮೇಲೆ ಹುಲಿಯಾಗಿದ್ದಾರೆ ಎಂದು ಚಾಟಿ ಬೀಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com