ಮತ್ತೆ ರಮೇಶ್ ಜಾರಕಿಹೊಳಿ ಆ್ಯಕ್ಟೀವ್: ಮಾಜಿ ಸಚಿವರ ನಿವಾಸದಲ್ಲಿ ಮಿತ್ರ ಮಂಡಳಿಯ ಅತೃಪ್ತ ಶಾಸಕರ ಸಭೆ!
ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಅಸಮಾಧಾನಿತ ಶಾಸಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
Published: 07th August 2021 08:41 AM | Last Updated: 07th August 2021 12:10 PM | A+A A-

ರಮೇಶ್ ಜಾರಕಿಹೊಳಿ
ಬೆಳಗಾವಿ: ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಅಸಮಾಧಾನಿತ ಶಾಸಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಕಾಂಗ್ರೆಸ್ -ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಕೆಲ ಶಾಸಕರು ಶುಕ್ರವಾರ ರಾತ್ರಿ ಸಭೆ ಸೇರಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರು ಆಕ್ರೋಶಗೊಂಡಿದ್ದಾರೆ. ಅಶ್ಲೀಲ ಸಿಡಿ ಪ್ರಕರಣದಲ್ಲಿ ಜಲ ಸಂಪನ್ಮೂಲ ಖಾತೆಗೆ ರಮೇಶ್ ಜಾರಕಿಹೊಳಿ ರಾಜಿನಾಮೆ ನೀಡಿದ್ದು, ಕ್ಲೀನ್ ಚಿಟ್ ಗಾಗಿ ಕಾಯುತ್ತಿದ್ದಾರೆ. ಆದರೆ ತಮ್ಮ ಬದಲಿಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಜಾರಕಿಹೊಳಿ ಸಹೋದರರು ಬೇಡಿಕೆಯಿಟ್ಟಿದ್ದರು,
ಆದರೆ ಪಕ್ಷ ಜಾರಕಿಹೊಳಿ ಸಹೋದರರನ್ನು ನಿರ್ಲಕ್ಷ್ಯಿಸಿದೆ. ಹೀಗಾಗಿ ಅಸಮಾಧಾನಗೊಂಡಿದ್ದ ಹಲವು ಶಾಸಕರು ಸಭೆಯಲ್ಲಿ ಭಾಗವಹಿಸಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.