'ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ'; ರೆಬೆಲ್ ನಾಯಕರಿಗೆ ಸಿಎಂ ಬೊಮ್ಮಾಯಿ ಖಡಕ್ ಮಾತು

ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನಲೆಯಲ್ಲಿ ಖಡಕ್ ತಿರುಗೇಟು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು:  ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನಲೆಯಲ್ಲಿ ಖಡಕ್ ತಿರುಗೇಟು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಚಿವ ಸ್ಥಾನ ನೀಡಲು ಮತ್ತು ಅವರು ಬಯಸಿದ ಖಾತೆಗಳನ್ನು ನೀಡಲು ಸಾಧ್ಯವಿಲ್ಲ. ಖಾತೆ ಬಗ್ಗೆ ಗೊಂದಲವಿದ್ದರೆ ಈ ಬಗ್ಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

ಈ ಹಿಂದೆ ಖಾತೆ ಹಂಚಿಕೆ ವಿಚಾರವಾಗಿ ಸಚಿವ ಆನಂದ್ ಸಿಂಗ್ ರ ಹೇಳಿಕೆ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, 'ಪ್ರತಿಯೊಬ್ಬರೂ ತಮಗೆ ಬೇಕಾದ ಖಾತೆಗಳನ್ನು ಪಡೆಯಲು ಸಾಧ್ಯವಿಲ್ಲ. ಸಚಿವ ಆನಂದ್ ಸಿಂಗ್ ನನಗೆ ಹತ್ತಿರವಾಗಿದ್ದಾರೆ. ಹಾಗಾಗಿ ಎಲ್ಲವೂ ಚೆನ್ನಾಗಿರುತ್ತದೆ. ನಾನು ಅವರನ್ನು ಕರೆದು ಮಾತನಾಡಿದೆ. ನಾನು ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದರು.

ಹೊಸದಾಗಿ ನೇಮಕಗೊಂಡ ಕರ್ನಾಟಕದ ಸಚಿವ ಆನಂದ್ ಸಿಂಗ್ ಅವರಿಗೆ ಅರಣ್ಯ, ಪರಿಸರ ಮತ್ತು ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ.  ಈ ಕುರಿತು ಮಾತನಾಡಿದ್ದ ಆನಂದ್ ಸಿಂಗ್ ಅವರು, "ನಾನು ಈ ಖಾತೆಯನ್ನು ಕೇಳಿಲ್ಲ. ಪಕ್ಷದ ವೇದಿಕೆಯಲ್ಲಿ ನಾನು ಮಾಡಿದ ಯಾವುದೇ ವಿನಂತಿಯನ್ನು ಪರಿಗಣಿಸಲಾಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಭೇಟಿ ಮಾಡಲು ನಾನು ಯೋಜಿಸುತ್ತಿದ್ದೇನೆ . ನನ್ನ ವಿನಂತಿಯನ್ನು ಮರುಪರಿಶೀಲಿಸುವಂತೆ ನಾನು ವಿನಂತಿಸುತ್ತೇನೆ ಎಂದು ಹೇಳಿದ್ದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com