ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ನಿಂದ ಅಡ್ಡಿ: ಸದಾನಂದ ಗೌಡ ವಾಗ್ದಾಳಿ

ನಿಗದಿತ ದಿನಗಳವರೆಗೆ ಲೋಕಸಭಾ ಅಧಿವೇಶನ ನಡೆಯಲಿದೆ. ಉಳಿದಿರುವ ಒಂದು ವಾರವಾದರೂ ಕಾಂಗ್ರೆಸ್ ಸಂಸದರು ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಡಿ.ವಿ. ಸದನಂದಗೌಡ ಕಾಂಗ್ರೆಸ್ ನಾಯಕರಿಗೆ ಆಗ್ರಹಿಸಿದ್ದಾರೆ.
ಸದಾನಂದಗೌಡ
ಸದಾನಂದಗೌಡ

ಬೆಂಗಳೂರು: ನಿಗದಿತ ದಿನಗಳವರೆಗೆ ಲೋಕಸಭಾ ಅಧಿವೇಶನ ನಡೆಯಲಿದೆ. ಉಳಿದಿರುವ ಒಂದು ವಾರವಾದರೂ ಕಾಂಗ್ರೆಸ್ ಸಂಸದರು ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಡಿ.ವಿ. ಸದನಂದಗೌಡ ಕಾಂಗ್ರೆಸ್ ನಾಯಕರಿಗೆ ಆಗ್ರಹಿಸಿದ್ದಾರೆ.

ಸಂಸತ್ತು ದೇಶದ ಶ್ರದ್ಧಾ ಕೇಂದ್ರವಾಗಿದೆ. ಜನರ ಭಾವನೆಗಳಿಗೆ ಅನುಗುಣವಾಗಿ ತೀರ್ಮಾನ ನಡೆಯಬೇಕೆಂಬ ನಿಟ್ಟಿನಲ್ಲಿ ಈ ಶ್ರದ್ಧಾ ಕೇಂದ್ರ ಕಾರ್ಯ ನಿರ್ವಹಿಸಬೇಕಿದೆ. ಆದರೆ, ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಜನರು ನಿರುದ್ಯೋಗಿಗಳಾದ ಸಂದರ್ಭ, ಉದ್ಯಮಗಳ ಕುಸಿತ, ಭಾರತದ ವೇಗಕ್ಕೆ ಸಣ್ಣ ಮಟ್ಟಿನ ತಡೆ ಉಂಟಾದ ಈ ಸಂದರ್ಭದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ವೇದಿಕೆ ಇದಾಗಬೇಕಿತ್ತು. ಆದರೆ ಕಾಂಗ್ರೆಸ್ ನಾಯಕರು ಎಲ್ಲವನ್ನೂ ಹಾಳುಮಾಡುತ್ತಿದ್ದಾರೆ" ಎಂದು ಡಿವಿ ಸದಾನಂದಗೌಡ ಕಾಂಗ್ರೆಸ್ ನಾಯಕರನ್ನು ಟೀಕಿಸಿದ್ದಾರೆ.

ರಾಜ್ಯಕ್ಕೆ ಬೇಕಾಗುವ ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನದಿಂದ ನೀರಿನ ಸಂಗ್ರಹವೂ ಹೆಚ್ಚಲಿದೆ. ಇದರಿಂದ ತಮಿಳುನಾಡಿಗೆ ಯಾವುದೇ ತೊಂದರೆ ಆಗದು. ನೆರೆ ನಿಯಂತ್ರಣಕ್ಕೂ ಇದು ಪೂರಕ ಎಂದು ಹೇಳಿದ್ದಾರೆ

ರಾಜ್ಯದ ಎಲ್ಲ 25 ಬಿಜೆಪಿ ಸಂಸದರು ಯೋಜನೆಯ ಅನುಷ್ಠಾನ ಬೆಂಬಲಿಸಲಿದ್ದಾರೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಬಿಜೆಪಿಯ ಎಲ್ಲ 25 ಸಂಸದರೂ ಶ್ರಮಿಸಲಿದ್ದಾರೆ ಎಂದು ಸದಾನಂದಗೌಡ ಭರವಸೆ ನೀಡಿದರು. "

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com