ಕಾಂಗ್ರೆಸ್ ನ ಜನಪರ ಯೋಜನೆಗಳ ಹೆಸರು ಬದಲಾಯಿಸುವುದೇ ಮೋದಿಯ 7 ವರ್ಷದ ಸಾಧನೆ: ಸತೀಶ್ ಜಾರಕಿಹೊಳಿ

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. 
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. 

ಸೋಮವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡೋದ್ರಿಂದ ಜನರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ ಮತ್ತು ಅದರಿಂದ ದೊಡ್ಡ ಬದಲಾವಣೆ ಏನೂ ಆಗುವುದಿಲ್ಲ ಎಂದರು

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ‌ 7 ವರ್ಷಗಳ ಆಡಳಿತದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಯೋಜನೆಗಳನ್ನು ಮಾಡಲಿಲ್ಲ. ನಮ್ಮ ಯೋಜನೆಗಳ ನೇಮ್, ಬೋರ್ಡ್ ಬಬದಲಾವಣೆ ಮಾಡಿ ಅದನ್ನು ತಮ್ಮ ಸಾಧನೆ ಎಂದು ದೇಶದ ಎದುರು ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು.

ಇಂದಿರಾ ಗಾಂಧಿ ಹೆಸರಿನ ಮೇಲೆ ನಡೆಯಬೇಕು ಎಂಬುದು ನಮ್ಮ ಆಸೆಯಾಗಿದೆ. ಹೆಸರು ಬದಲಾವಣೆ ಮಾಡೋದ್ರಿಂದ ನಮ್ಮ ಸಾಧನೆ ಮುಚ್ಚಿಡೋಕೆ ಆಗುವುದಿಲ್ಲ ಎಂದ ಜಾರಕಿಹೊಳಿ, ಸಿದ್ದರಾಮಯ್ಯನವರು ವಿಶೇಷ ಕಾಳಜಿ ವಹಿಸಿ ಇಂದಿರಾ ಕ್ಯಾಂಟೀನ್‌ಗೆ ಹೆಚ್ಚಿನ ಅನುದಾನ ಕೊಡುತ್ತಿದ್ದರು. ಆದರೆ ನಮ್ಮ ಯೋಜನೆ ಜನಪ್ರಿಯ ಆಗುತ್ತದೆ ಎಂದು ಬಿಜೆಪಿಯವರು ದುಡ್ಡು ಕೊಡುತ್ತಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ರಾಜ್ಯವು ಸಾಂಕ್ರಾಮಿಕ ರೋಗದಿಂದ ತತ್ತರಿಸುತ್ತಿರುವ ಸಮಯದಲ್ಲಿ ಮತ್ತು ಉತ್ತರ ಕರ್ನಾಟಕದ ಪ್ರದೇಶಗಳು ಪ್ರವಾಹಕ್ಕೆ ಸಾಕ್ಷಿಯಾಗುತ್ತಿರುವಾಗ, ಬಿಜೆಪಿ ನಾಯಕರು ಖಾತೆಗಳಿಗಾಗಿ ಕಿತ್ತಾಡುತ್ತಿದ್ದಾರೆ, ಇದನ್ನು ಅಧಿಕಾರದ ದುರಾಸೆ ಎಂದು ಕರೆಯುತ್ತೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com