ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ: ಶಿವರಾಮ್ ಹೆಬ್ಬಾರ್
ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
Published: 13th August 2021 04:20 PM | Last Updated: 13th August 2021 04:20 PM | A+A A-

ಸಚಿವ ಶಿವರಾಮ್ ಹೆಬ್ಬಾರ್
ಬೆಂಗಳೂರು: ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾರ್,ಇಂದಿರಾ ಕ್ಯಾಂಟೀನ್ ಹೆಸರನ್ನು ನಾಳೆಯೇ ಬದಲಾವಣೆ ಮಾಡುತ್ತೇವೆಂದು ಸಿಎಂ ಹೇಳಿಲ್ಲ.ಈ ಬಗ್ಗೆ ಸಿಎಂ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೂ ನಾವೆಲ್ಲ ಬದ್ಧ ಎಂದರು.
ಇನ್ನು ಮಿತ್ರಮಂಡಳಿಯಲ್ಲಿ ಕೆಲವರಿಗೆ ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಿವರಾಮ್ ಹೆಬ್ಬಾರ್, ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಅತಿ ಶೀಘ್ರದಲ್ಲಿ ಸಿಎಂ ಒಳ್ಳೆಯ ತಿರ್ಮಾನ ಕೈಗೊಳ್ಳುತ್ತಾರೆ. ನಮ್ಮ ಸ್ನೇಹಿತರಿಗೆ ಸಚಿವ ಸ್ಥಾನ ಸಿಗುತ್ತದೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನದ ವಿಚಾರ ಕೊರ್ಟ್ ನಲ್ಲಿದೆ. ಎಲ್ಲವೂ ಮುಗಿದ ಮೇಲೆ ಸಚಿವ ಸ್ಥಾನ ಸಿಗುತ್ತದೆ ಎಂದು ಶಿವಾರಂ ಹೆಬ್ಬಾರ್ ಸ್ಪಷ್ಟಪಡಿಸಿದರು.