ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ, ಯಾವ ಟೈಂನಲ್ಲಿ ಬೇಕಾದ್ರು ಬೀಳಬಹುದು: ಸಿದ್ದರಾಮಯ್ಯ

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಕೂಡ ಗೊಂದಲ ಮುಂದುವರಿದಿದೆ, ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಕೂಡ ಗೊಂದಲ ಮುಂದುವರಿದಿದೆ, ಈ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ ಎಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಕೂಡ ಹಿಂದಿನ ಯಡಿಯೂರಪ್ಪ ನೇತೃತ್ವದ ಸರ್ಕಾರದಂತೆ ಗೊಂದಲ, ಭಿನ್ನಾಭಿಪ್ರಾಯಗಳು ಮುಂದುವರಿದಿವೆ. ಆಡಳಿತ ಪಕ್ಷದ ಶಾಸಕರೇ ಕುದಿಯುತ್ತಿದ್ದಾರೆ. ಹೀಗಾಗಿ ಸರ್ಕಾರ ಪೂರ್ಣಾವಧಿ ಮುಗಿಸುವುದು ಡೌಟು ಎಂದು ಭವಿಷ್ಯ ನುಡಿದಿದ್ದಾರೆ.

ಯತ್ನಾಳ್, ಬೆಲ್ಲದ್ ದೆಹಲಿಗೆ ಹೋಗಿ ಬರುತ್ತಿದ್ದಾರೆ, ಇನ್ನು ರಾಜ್ಯದಲ್ಲಿ ಕೂಡ ಮಂತ್ರಿ ಪದವಿ ಅತೃಪ್ತ ಶಾಸಕರು ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಭೇಟಿ ಮಾಡುತ್ತಲೇ ಇದ್ದಾರೆ. ಅಂದರೆ ಅಸಮಾಧಾನ, ಅತೃಪ್ತಿ ಶಮನವಾಗಿಲ್ಲ, ಮೊದಲಿನಂತೆ ಮುಂದುವರಿದಿದೆ ಎಂದರ್ಥ. ಹಾಗಾಗಿ ಈ ಸರ್ಕಾರ ಯಾವ ಟೈಂನಲ್ಲಿ ಬೇಕಾದ್ರು ಬೀಳುತ್ತೆ ಎಂದು ಹೇಳಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ತೆಗೆಯುತ್ತಾರೆ, ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಅವರಿಗೆ ಹೈಕಮಾಂಡ್ ನಿಂದ ಸೂಚನೆ ಬಂದಿದೆ ಎಂದು ನಂಬಲರ್ಹ ಮೂಲಗಳಿಂದ ನನಗೆ ಮಾಹಿತಿ ಸಿಕ್ಕಿದೆ ಎಂದು ನಾಲ್ಕೈದು ತಿಂಗಳ ಹಿಂದೆಯೇ ಸಿದ್ದರಾಮಯ್ಯನವರು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com