ಆನಂದ್ ಸಿಂಗ್'ಗೆ ಒಳ್ಳೆಯ ಖಾತೆ ಕೊಟ್ಟರೆ ತಪ್ಪೇನಿಲ್ಲ: ಯತ್ನಾಳ್

ರಾಜ್ಯ ಸಚಿವ ಸಂಪುಟದಲ್ಲಿ ಉನ್ನತ ಖಾತೆಗಾಗಿ ಆಗ್ರಹಿಸುತ್ತಿರುವ ಸಚಿವ ಆನಂದ್ ಸಿಂಗ್ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ರಾಜ್ಯ ಸಚಿವ ಸಂಪುಟದಲ್ಲಿ ಉನ್ನತ ಖಾತೆಗಾಗಿ ಆಗ್ರಹಿಸುತ್ತಿರುವ ಸಚಿವ ಆನಂದ್ ಸಿಂಗ್ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಖಾತೆಗಾಗಿನ ಆನಂದ್ ಸಿಂಗ್ ಅವರ ಆಗ್ರಹದಲ್ಲಿ ತಪ್ಪೇನಿಲ್ಲ. ಆನಂದ್ ಸಿಂಗ್ ಅವರು ಒಬ್ಬ ಪ್ರಬುದ್ಧ ರಾಜಕಾರಣಿ. ಅವರೊಬ್ಬ ಒಳ್ಳೆಯ, ಕ್ರೀಯಾಶೀಲ ವ್ಯಕ್ತಿ. ಅವರನ್ನು ಸಿಎಂ ಗೌರವಯುತ ವಾಗಿ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ. 

ಇದು ನನ್ನ ವೈಯಕ್ತಿಕ ಅಭಿಪ್ರಾಯ. ಅವರಿಗೆ ಒಂದು ಒಳ್ಳೆಯ ಖಾತೆ ಕೊಟ್ಟರೆ ತಪ್ಪೇನಿಲ್ಲ. ಕೆಲಸ ಮಾಡುವವರಿಗೆ ಕೊಡಬೇಕು. ಅವರು ಅರಣ್ಯ ಇಲಾಖೆಯ ಸಚಿವರಿದ್ದಾಗ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಿಗೆ ಒಳ್ಳೆಯ ಖಾತೆ ಕೊಡುವುದು ಸೂಕ್ತ. ಬಿಜೆಪಿ ಸರ್ಕಾರ ಬರಬೇಕಾದರೆ ಮೊದಲು ರಾಜೀನಾಮೆ ಕೊಟ್ಟವರು ಆನಂದ್ ಸಿಂಗ್. ನನಗೆ ವಿಶ್ವಾಸ ಇದೆ ಹೈಕಮಾಂಡ್ ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, "ಹಾಸನ ಶಾಸಕ ಪ್ರೀತಂ ಗೌಡ ಜೆಡಿಎಸ್ ವಿರುದ್ಧ ಹೋರಾಟ ಮಾಡಿ ಶಾಸಕರಾಗಿ ಆಯ್ಕೆಯಾಗಿ ಬಂದಿದ್ದಾರೆ. ಸಿಎಂ ಬೊಮ್ಮಾಯಿ ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಮಾಡಿದ್ದಕ್ಕೆ ಒಂದು ರೀತಿಯ ಕಸಿವಿಸಿ ಆಗಿದೆ. ದೇವೇಗೌಡರನ್ನು ಭೇಟಿಯಾಗಿರುವ ಬಗ್ಗೆ ನನಗೆ ವೈಯಕ್ತಿಕ ಬೇಸರವಿಲ್ಲ. ದೇವೇಗೌಡರು ದೇಶದ ಪ್ರಧಾನಿಯಾಗಿದ್ದವರು. ಆದರೆ ಮುಖ್ಯಮಂತ್ರಿ ಕೇವಲ ದೇವೇಗೌಡರನ್ನು ಮಾತ್ರ ಭೇಟಿಯಾಗಿದ್ದು ಸರಿಯಲ್ಲ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com