ವಿವಾದ ತಪ್ಪಿಸಲು ಆಡಳಿತ ಪಕ್ಷದ ಸಚಿವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸದಿರಲು ರೇವಣ್ಣ ನಿರ್ಧಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಇತ್ತೀಚಿನ ಭೇಟಿ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಭೋಜನ ಅಥವಾ ಉಪಹಾರಕ್ಕಾಗಿ ಬಿಜೆಪಿ ಸರ್ಕಾರದ ಯಾವುದೇ...
ಎಚ್. ಡಿ. ರೇವಣ್ಣ
ಎಚ್. ಡಿ. ರೇವಣ್ಣ

ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಇತ್ತೀಚಿನ ಭೇಟಿ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಭೋಜನ ಅಥವಾ ಉಪಹಾರಕ್ಕಾಗಿ ಮುಖ್ಯಮಂತ್ರಿಗಳು ಸೇರಿದಂತೆ ಬಿಜೆಪಿ ಸರ್ಕಾರದ ಯಾವುದೇ ಸಚಿವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸುವುದಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಅವರು ಸೋಮವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇವೇಗೌಡರ ಪುತ್ರರೂ ಆಗಿರುವ ಎಚ್.ಡಿ.ರೇವಣ್ಣ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಸಿಎಂ ಬೊಮ್ಮಾಯಿ ಅವರ ಸೌಜನ್ಯದ ಭೇಟಿಯಲ್ಲಿ ಏನು ತಪ್ಪಾಗಿದೆ? ದುರದೃಷ್ಟವಶಾತ್ ಒಂದು ಭಾಗದ ರಾಜಕೀಯ ನಾಯಕರು ತಮ್ಮ ರಾಜಕೀಯ ಲಾಭಕ್ಕಾಗಿ ಈ ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದರು.

ಜೆಡಿಎಸ್ ನಲ್ಲಿರುವ ನಾಯಕರು ಎಂದಿಗೂ ವೈಯಕ್ತಿಕ ಲಾಭಕ್ಕಾಗಿ ಆಡಳಿತ ಪಕ್ಷದ ಮಂತ್ರಿಗಳನ್ನು ಆಹ್ವಾನಿಸುವುದಿಲ್ಲ ಅಥವಾ ಭೇಟಿ ಮಾಡುವುದಿಲ್ಲ. ಶಾಸಕರಾಗಿ ಮತ್ತು ಸಚಿವರಾಗಿ ಆಯ್ಕೆಯಾದ ನಂತರ ಮಾಡಿದ ಪ್ರಮಾಣವಚನವನ್ನು ಅವರು ಮರೆತಿರಬಹುದು ಎಂದು ರೇವಣ್ಣ ಹೇಳಿದರು. 

ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ನಂಬಿಕೆ ಇದ್ದಲ್ಲಿ ಅವರು ಸಿಎಂ ಭೇಟಿಯ ಬಗ್ಗೆ ಈ ರೀತಿ ಹೇಳಿಕೆ ನೀಡುತ್ತಿರಲಿಲ್ಲ. ಭವಿಷ್ಯದಲ್ಲಿ ವಿವಾದಗಳನ್ನು ತಪ್ಪಿಸಲು ಬಿಜೆಪಿ ನಾಯಕರು, ಶಾಸಕರು ಮತ್ತು ಸಚಿವರನ್ನು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡದಂತೆ ರೇವಣ್ಣ ಮನವಿ ಮಾಡಿದ್ದಾರೆ.

ಇದೇ ವೇಳೆ, ಜಿಲ್ಲಾ ಪಂಚಾಯಿತಿ ಸೇರಿದಂತೆ ಗ್ರಾಮೀಣ ಸಂಸ್ಥೆಗಳಿಗೆ ಚುನಾವಣೆ ಘೋಷಿಸದ ರಾಜ್ಯ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿ ರೇವಣ್ಣ, ಚುನಾವಣಾ ಆಯೋಗವು ಚುನಾವಣೆಯನ್ನು ವಿಳಂಬ ಮಾಡುವ ಮೂಲಕ ಚುನಾಯಿತ ಪ್ರತಿನಿಧಿಯ ಸಾಂವಿಧಾನಿಕ ಅಧಿಕಾರವನ್ನು ಕಸಿದುಕೊಳ್ಳಬಾರದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com