ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ ಬಿಜೆಪಿ ಪಾಲು: ಸುನಂದಾ ಪಾಲನೇತ್ರ ಆಯ್ಕೆ

ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ ಬಿಜೆಪಿ ಪಾಲಾಗಿದೆ. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.ಈ ಮೂಲಕ ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೊದಲ ಬಾರಿ ಮೇಯರ್ ಪಟ್ಟ ಅಲಂಕರಿಸುತ್ತಿದೆ.
ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಗೊಂಡ ಬಿಜೆಪಿಯ ಸುನಂದಾ ಪಾಲನೇತ್ರ
ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಗೊಂಡ ಬಿಜೆಪಿಯ ಸುನಂದಾ ಪಾಲನೇತ್ರ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ ಬಿಜೆಪಿ ಪಾಲಾಗಿದೆ. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.ಈ ಮೂಲಕ ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೊದಲ ಬಾರಿ ಮೇಯರ್ ಪಟ್ಟ ಅಲಂಕರಿಸುತ್ತಿದೆ.

ಈ ಬಾರಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮುರಿದು ಬಿದ್ದ ಹಿನ್ನೆಲೆಯಲ್ಲಿ 26 ಮತಗಳನ್ನು ಗಳಿಸಿದ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾದರು. ಜೆಡಿಎಸ್ ಸದಸ್ಯರ ವಿರುದ್ಧ ಧಿಕ್ಕಾರ, ಆಕ್ರೋಶ ಹೊರಹಾಕಿ ಕಾಂಗ್ರೆಸ್ ಸದಸ್ಯರು ವಾಕ್ ಔಟ್ ಮಾಡಿದರು. ಇಂದು ಚುನಾವಣೆ ನಡೆದ ವೇಳೆ ಪಾಲಿಕೆಯಲ್ಲಿ ತೀವ್ರ ಹೈಡ್ರಾಮಾ ನಡೆಯಿತು.

ಇಂದು ಬೆಳಗ್ಗೆ ಮತ ಪ್ರಕ್ರಿಯೆ ಆರಂಭವಾದ ತಕ್ಷಣ ಜೆಡಿಎಸ್ ಸದಸ್ಯರು ತಟಸ್ಥ ನಿಲುವು ತೋರಿದರು. ಆಗ ಕಾಂಗ್ರೆಸ್ ಸದಸ್ಯರು ಛೀಮಾರಿ ಹಾಕಿ ಹೊರನಡೆದರು. ಈ ಬಾರಿ ಕೂಡ ಮೇಯರ್ ಪಟ್ಟ ತಮಗೆ ಸಿಗಬೇಕೆಂದು ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದ್ದೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುರಿದುಬೀಳಲು ಕಾರಣವಾಯಿತು.

ಸಿಎಂ ಅಭಿನಂದನೆ: ನೂತನ ಮೇಯರ್ ಆಗಿ ಆಯ್ಕೆಯಾದ ಸುನಂದಾ ಪಾಲನೇತ್ರ ಅವರಿಗೆ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಹಳ ವರ್ಷಗಳ ನಂತರ ಬಿಜೆಪಿಯ ಮೇಯರ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆಯ ಕಾರ್ಪೊರೇಟರ್ ಗಳಿಗೆ, ಜಿಲ್ಲೆಯ ಕಾರ್ಯಕರ್ತರು, ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಭಿನಂದನೆ ಮತ್ತು ಧನ್ಯವಾದ ತಿಳಿಸುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com