ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆ ಬೇಡ: ಸರ್ಕಾರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು ಗ್ರಾಮೀಣ ಪ್ರದೇಶ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆಗಳನ್ನೂ ಮಾಡದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬೆಂಗಳೂರು ಗ್ರಾಮೀಣ ಪ್ರದೇಶ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆಗಳನ್ನೂ ಮಾಡದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, ಎತ್ತಿನಹೊಳೆ ಯೋಜನೆಯ ಭೈರಗೊಂಡ್ಲು ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು 5.78 ಟಿಎಂಸಿ ಯಿಂದ 2 ಟಿಎಂಸಿವರೆಗೆ ಕಡಿತಗೊಳಿಸುವ ಪರ್ಯಾಯ ಪ್ರಸ್ತಾವನೆ ಕೂಡಲೇ ಕೈಬಿಡಿ ಎಂದು ಒತ್ತಾಯಿಸಿದ್ದಾರೆ. 

ರಾಜ್ಯ ಸರ್ಕಾರದ ಪರಿಷ್ಕೃತ ಪ್ರಸ್ತಾವನೆಯಿಂದಾಗಿ ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಯ ಮೇಲೆ ಉಂಟಾಗುವ ಭೀಕರ ಪರಿಣಾಮ ಬೀರಲಿದೆ. ಹೀಗಾಗಿ ರಾಜ್ಯ ಸರ್ಕಾರದ ಪರಿಸರದ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕು ಇಲ್ಲದಿದ್ದರೆ ಬೆಂಗಳೂರು ಗ್ರಾಮಾಂತರ ಕೋಲಾರ ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. 

ಎತ್ತಿನಹೊಳೆಯ ಕಾಮಗಾರಿ 2012ರಿಂದ ಜಾರಿಯಲ್ಲಿದೆ ಇದುವರೆಗೂ 8200ಕ್ಕೂ ಹೆಚ್ಚು ಕೋಟಿ ರೂಪಾಯಿ ಖರ್ಚಾಗಿದೆ. ಯೋಜನೆಯ ಪ್ರಮುಖ ಭಾಗವಾದ ಬೈರಗೊಂಡ್ಲು ನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಇಂತಹ ಸಂದರ್ಭದಲ್ಲಿ ಪರಿಷ್ಕೃತ ಪ್ರಸ್ತಾವನೆ ಬೆಂಗಳೂರು ಗ್ರಾಮಾಂತರ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ತೊಂದರೆಯಾಗಲಿದೆ. 

ಎತ್ತಿನಹೊಳೆ ಯೋಜನೆಯನ್ನು ಆರಂಭಗೊಂಡಿರುವುದು ಬೆಂಗಳೂರು ಗ್ರಾಮಾಂತರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು. ಆದರೆ, ರಾಜ್ಯ ಸರ್ಕಾರ ಈ ಯೋಜನೆಯ ಪರಿಷ್ಕೃತ ಪ್ರಸ್ತಾವನೆಗೆ ಮುಂದಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ಯಾಯವಾಗಲಿದೆ. ರಾಜ್ಯ ಸರ್ಕಾರ ಪರಿಷ್ಕೃತ ಯೋಜನೆಯನ್ನು ಕೂಡಲೇ ಕೈಬಿಟ್ಟು, ಅಗತ್ಯವಿರುವ ಸೇರಿದಂತೆ ಇನ್ನಿತರ ಕೆಲಸಗಳನ್ನು ಆರಂಭಿಸುವಂತೆ ಅವರು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com