ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದೆ: ಡಿ ಕೆ ಶಿವಕುಮಾರ್ 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದ್ದು, ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಸರ್ಕಾರದ ಸಚಿವರುಗಳು ದಿನಕ್ಕೊಂದು ಹೇಳಿಕೆ ನೀಡಿಕೊಂಡು, ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸರ್ಕಾರ ವಿರುದ್ಧ ಗುಡುಗಿದ್ದಾರೆ. 
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದ್ದು, ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಸರ್ಕಾರದ ಸಚಿವರುಗಳು ದಿನಕ್ಕೊಂದು ಹೇಳಿಕೆ ನೀಡಿಕೊಂಡು, ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸರ್ಕಾರ ವಿರುದ್ಧ ಗುಡುಗಿದ್ದಾರೆ. 

ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿ ಪ್ರಣಾಳಿಕೆ ಕೇವಲ ಕಮರ್ಷಿಯಲ್ ಆಗಿದೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಸರ್ಕಾರ ಏನೂ ಮಾಡಿಲ್ಲ ಎಂದು ಆಪಾದಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಡಿಕೆಶಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಪ್ರಣಾಳಿಕೆ ಕೇವಲ ಕಮರ್ಷಿಯಲ್ ಆಗಿದೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಸರ್ಕಾರ ಏನೂ ಮಾಡಿಲ್ಲ ಎಂದು ಆರೋಪಿಸಿದರು. ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ಬೆಡ್​ಗೂ ಕ್ಯೂ ನಿಲ್ಲಿಸಿದರು, ಆ್ಯಂಬುಲೆನ್ಸ್​ಗೂ ಕ್ಯೂ ನಿಲ್ಲಿಸಿದರು. ಬಿಜೆಪಿಯಲ್ಲಿ ಎಲ್ಲಾ ಚೆನ್ನಾಗಿದ್ದರೂ ಸಿಎಂ ಬದಲಾವಣೆ ಯಾಕಾಯ್ತು ಎಂದು ಪ್ರಶ್ನಿಸಿದರು.

ನಾವು ಬಿಜೆಪಿಯವರಂತೆ ಸುಳ್ಳು ಹೇಳುವುದಿಲ್ಲ, ಪ್ರಣಾಳಿಕೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನೂ ಈಡೇರಿಸುವ ದೃಢ ಸಂಕಲ್ಪ ಮಾಡಿದ್ದೇವೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಇದೆ, ರಾಜ್ಯ ಹಾಗೂ ಸ್ಥಳೀಯವಾಗಿ ಅವರದ್ದೇ ಸರಕಾರ ಇತ್ತು. ಆದರೆ ಜನರಿಗೆ ಏನೂ ಲಾಭ ಆಗಿಲ್ಲ ಎಂದರು.

ಬಿಜೆಪಿಯವರಿಗೆ ನುಡಿದಂತೆ ನಡೆಯಲು ಆಗಲಿಲ್ಲ, ಮಹಾನಗರದ ಮತದಾರರ ಮತ ಕೇಳುವ ನೈತಿಕತೆ ಇವರಿಗಿಲ್ಲ. ಹುಬ್ಬಳ್ಳಿ-ಧಾರವಾಡ ನಡುವೆ ಬಿಆರ್ ಟಿಎಸ್ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಶಾಸಕ ಬೆಲ್ಲದ್ ಹೇಳಿದ್ದಾರೆ. ಭ್ರಷ್ಟಾಚಾರ ಏನು ನಡೆದಿದೆ ಅನ್ನೋದನ್ನ ಬೆಲ್ಲದ್ ಅವರೇ ಹೇಳ್ತಾರೆ. ಬೆಳಗಾವಿ - ಬೆಂಗಳೂರು - ಹುಬ್ಬಳ್ಳಿ ಹೈಟೆಕ್ ರಸ್ತೆ ಮಾಡ್ತೇನೆ ಅಂದ್ರು. ಆದರೆ ಯಾವುದೂ ಅನುಷ್ಠಾನಕ್ಕೆ ಬರಲಿಲ್ಲ ಎಂದು ಸರ್ಕಾರದ ವಿರುದ್ದ ಡಿಕೆಶಿ ಗುಡುಗಿದರು.

ಆಸ್ತಿ ತೆರಿಗೆಯಲ್ಲಿ ಪ್ರತಿಶಿತ 50 ರಷ್ಟು ಕಡಿತ ಸೇರಿದಂತೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ತಮ್ಮ ಪಕ್ಷ ಬಿಡುಗಡೆಗೊಳಿಸಿರುವ ಪ್ರಣಾಳಿಕೆಯ ಪ್ರತಿ ವಾಗ್ದಾನವನ್ನೂ ಈಡೇರಿಸಿ ಜಾರಿಗೊಳಿಸುತ್ತೇವೆ ಎಂದು ವಾಗ್ದಾನ ನೀಡಿದರು. 
ಖಾಸಗಿ ಸಹಭಾಗಿತ್ವದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಿಬಿಎಸ್ಸಿ ಸ್ಕೂಲ್ ಮಾಡ್ತೇವೆ ಅಂಥಾ ಜೋಶಿ, ಶೆಟ್ಟರ್ ಹೇಳಿದ್ದರು. ಅವು ಎಲ್ಲಿವೆ? ನಿಮ್ಮ ಶಾಸಕರನ್ನು ನಮ್ಮ ಜೊತೆ ಕಳಿಸಿ, ನಾವು ನೋಡ್ಕೊಂಡ್ ಬರ್ತೀವಿ ಎಂದು ಸವಾಲೆಸೆದರು.

ಇದಕ್ಕೂ ಮುನ್ನ ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿದ ಅವರು ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಸೈದ ಫತೇಶಾವಲಿ ದರ್ಗಾಕ್ಕೆ ಸಹ ಭೇಟಿ ಕೊಟ್ಟರು. ನಿನ್ನೆ ರಾತ್ರಿ ಮೂರು ಸಾವಿರ ಮಠಕ್ಕೆ ಭೇಟಿ ನೀಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com