ಭಾರತದಲ್ಲಿ ಹುಟ್ಟಿದ ಧರ್ಮಗಳಿಂದ ಮಾತ್ರ ಜಾತ್ಯತೀತತೆ ರಕ್ಷಿಸಲು ಸಾಧ್ಯ: ಸಿಟಿ ರವಿ

ಭಾರತದಲ್ಲಿ ಹುಟ್ಟಿದ ಧರ್ಮಗಳು ಮಾತ್ರ ಜಾತ್ಯತೀತತೆ ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ರಕ್ಷಿಸಬಲ್ಲವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಂಗಳವಾರ ಹೇಳಿದ್ದಾರೆ.
ಸಿಟಿ ರವಿ
ಸಿಟಿ ರವಿ

ಕಲಬುರಗಿ: ಭಾರತದಲ್ಲಿ ಹುಟ್ಟಿದ ಧರ್ಮಗಳು ಮಾತ್ರ ಜಾತ್ಯತೀತತೆ ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ರಕ್ಷಿಸಬಲ್ಲವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಟಿ ರವಿ, ಜನರು ತಮ್ಮ ವಾರ್ಡ್‌ಗಳು, ನಗರಗಳು ಅಥವಾ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಬೆಂಬಲಿಸದಿದ್ದರೆ ದೇಶದಲ್ಲಿ 'ಮಿನಿ ಪಾಕಿಸ್ತಾನ್‌ಗಳು' ಸೃಷ್ಟಿಯಾಗುತ್ತವೆ ಎಂದರು.

ಶುಕ್ರವಾರ ನಡೆಯಲಿರುವ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಆಗಮಿಸಿರುವ ಸಿಟಿ ರವಿ ಅವರು ಇಂದು ಕೆಲವು ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿದರು ಮತ್ತು ಬಿಜೆಪಿ ಪರವಾಗಿ ಜನರ ಪ್ರತಿಕ್ರಿಯೆ ಪ್ರೋತ್ಸಾಹದಾಯಕವಾಗಿದೆ ಎಂದಿದ್ದಾರೆ.

370ನೇ ವಿಧಿಯನ್ನು ರದ್ದುಗೊಳಿಸಲು ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ನಿಜವಾದ ಅರ್ಥದಲ್ಲಿ ಭಾರತದ ತೆಕ್ಕೆಗೆ ತರಲು ಬಿಜೆಪಿಯೇ ಅಧಿಕಾರಕ್ಕೆ ಬರಬೇಕಾಯಿತು ಎಂದು ಅವರು ಹೇಳಿದರು. 

ತಾನು ದಲಿತ ಕಲ್ಯಾಣದ ಚಾಂಪಿಯನ್ ಎಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಏಕೆ ಭಾರತ ರತ್ನ ನೀಡಲಿಲ್ಲ ಎಂದು ಸಿಟಿ ರವಿ ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com