ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಕ್ಷೇತ್ರದ ‌ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಯೂಸುಫ್ ಬಾಬು
ಯೂಸುಫ್ ಬಾಬು

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಕ್ಷೇತ್ರದ ‌ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮತ್ತು ಬಿಜೆಪಿ ಎಸ್.ಸಿ. ಮೋರ್ಛಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾಗೆ ದೂರು ಸಲ್ಲಿಸಿದ್ದು,ಪ್ರಚಾರ ಭಾಷಣದಲ್ಲಿ ಹಣ ನೀಡುವ ಆಮಿಷ ಒಡ್ಡಿರುವ ಆರೋಪ ಮಾಡಿರುವ ಬಿಜೆಪಿ ಚುನಾವಣಾ ಕಣದಿಂದ ಯೂಸುಫ್ ಬಾಬು ವಜಾಗೊಳಿಸುವಂತೆ ಮನವಿ ಮಾಡಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ,ಕಾಂಗ್ರೆಸ್ ಯೂಸುಫ್ ಬಾಬು ಅವರನ್ನು ಚುನಾವಣಾ ಕಣದಿಂದ ನಿವೃತ್ತಿಗೊಳಿಸಬೇಕು.ಯೂಸುಫ್ ಬಾಬು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ.

ಬಿಜೆಪಿ ವಿರುದ್ಧ ಆರೋಪ ಮಾಡುವುದನ್ನು ಕಾಂಗ್ರೆಸ್ ನಿಲ್ಲಿಸಬೇಕು.ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ಅಭ್ಯರ್ಥಿಯನ್ನು ನಿವೃತ್ತಿಗೊಳಿಸಲಿ.ಯೂಸುಫ್ ಬಾಬು ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಕ್ರಮ ತೆಗೆದುಕೊಳ್ಳಬೇಕು, ಪಕ್ಷದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com