ಪರಿಷತ್ ಚುನಾವಣೆಯಲ್ಲಿಯೂ ವಿಜಯೇಂದ್ರ ಹೈಲೈಟ್: ಮುಂದಿನ ತಲೆಮಾರಿನ ನಾಯಕನ ಪಟ್ಟಕ್ಕೆ ಬಿಎಸ್ ವೈ ಬಿಗಿ ಪಟ್ಟು!

ಚುನಾವಣಾ ಪ್ರಚಾರವು ಮತ್ತೊಮ್ಮೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತೆ ಲೈಮ್ ಲೈಟ್ ಆಗಿದ್ದಾರೆ.
ವಿಜಯೇಂದ್ರ
ವಿಜಯೇಂದ್ರ

ಬೆಂಗಳೂರು:  ಚುನಾವಣಾ ಪ್ರಚಾರವು ಮತ್ತೊಮ್ಮೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತೆ ಲೈಮ್ ಲೈಟ್ ಆಗಿದ್ದಾರೆ.

ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಿಂಗಾಯತ ಪ್ರಬಲ ನಾಯಕ ಬಿ.ಎಸ್ ಯಡಿಯೂರಪ್ಪ ಪ್ರಾದೇಶಿಕ ಪಕ್ಷ ಜೆಡಿಎಸ್ ಬೆಂಬಲ ಕೋರಿದ್ದಾರೆ.  ಹೀಗಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ, ಈ ಮೂಲಕ ಯಡಿಯೂರಪ್ಪ ರಾಜಕೀಯ ಪ್ರಾಬಲ್ಯ ಮೆರೆದಿದ್ದಾರೆ.

ಯಡಿಯೂರಪ್ಪನವರ ಹಿರಿತನವನ್ನು ಪರಿಗಣಿಸಿ ಅವರ ಬಗ್ಗೆ ಚೆನ್ನಾಗಿ ಮಾತನಾಡಿದ್ದರೂ ಜೆಡಿಎಸ್ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ಅರ್ಥವಲ್ಲ ಎಂದು ಆದರೆ, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಲು ಹಳೇ ಮೈಸೂರು ಭಾಗದಲ್ಲಿ ಪ್ರವಾಸ ನಡೆಸಿದ್ದರು. ಈ ವೇಳೆ  ಜೆಡಿಎಸ್  ಪಕ್ಷವನ್ನು "ಮುಳುಗುತ್ತಿರುವ ದೋಣಿಎಂದು ಲೇವಡಿ ಮಾಡಿದ್ದರು. ಅದಾದ ನಂತರ ಕುಮಾರಸ್ವಾಮಿ ಅರುಣ್ ಸಿಂಗ್  ಹೇಳಿಕೆಗೆ ತಿರುಗೇಟು ನೀಡಿದ್ದರು.

ಪರಿಷತ್ತಿನ ಚುನಾವಣೆಯ ನಂತರ ಯಡಿಯೂರಪ್ಪ ಏಕಾಂಗಿಯಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಪ್ರತಿ ಜಿಲ್ಲೆಗೆ ಭೇಟಿ ನೀಡಿ ಪಕ್ಷ ಸಂಘಟನೆ ಮಾಡುವುದಾಗಿ ತಿಳಿಸಿದ್ದಾರೆ.  ತಮ್ಮ ಉತ್ತರಾಧಿಕಾರಿ ವಿಜಯೇಂದ್ರ ಎಂಬುದನ್ನು ಅವರು ತಳ್ಳಿ ಹಾಕಿಲ್ಲ, ಮುಂದಿನ ತಲೆಮಾರಿನ ನಾಯಕನನ್ನಾಗಿ ಬೆಳೆಸುವ ಜವಾಬ್ದಾರಿ ಯಡಿಯೂರಪ್ಪ ಮೇಲಿದೆ.

ಇನ್ನೂ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಸನ್ಯಾಸಿಯಲ್ಲ, 2023 ರ ವಿಧಾನಸಭೆ ಚುನಾವಣೆಗಾಗಿ ಅವರು ಪಕ್ಷ ಸಂಘಟಿಸುತ್ತಿದ್ದಾರೆ ಎಂದು  ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ವಿಜಯೇಂದ್ರ ತಮ್ಮ ನಿಷ್ಠಾವಂತ ನಾಯಕರ  ಗುಂಪು ರಚಿಸುತ್ತಿದ್ದಾರೆ, ಅವರಲ್ಲಿ ಮೈಸೂರು ಎಂಎಲ್ ಸಿ ಅಭ್ಯರ್ಥಿ ರಘು ಕೌಟಿಲ್ಯ ಮತ್ತು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಮಂಜು ಇದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿರುವ ಯಡಿಯೂರಪ್ಪ ಬಿಟ್ ಕಾಯಿನ್ ವಿಚಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರವನ್ನು ಸಮರ್ಥಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಇದನ್ನು ಅಸ್ತ್ರವನ್ನಾಗಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಹಗರಣದ ಬಗ್ಗೆ ತಿಳಿದಿರುವುದರಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿಕೆ ನೀಡಿದ್ದು ಬಿಟ್ಟರೆ, ಯಡಿಯೂರಪ್ಪ ಅವರು ಯಾವುದೇ ಪಕ್ಷದ ನಾಯಕರನ್ನು ಸಮರ್ಥಿಸಿಕೊಳ್ಳಲಿಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇತ್ತೀಚೆಗೆ ದೆಹಲಿಗೆ ತೆರೆಳಿ ವರಿಷ್ಠರ ಜೊತೆ ಚರ್ಚಿಸಿದ್ದರು, ವಾಪಸಾದ ಬಳಿದ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com