ಮೈಸೂರಿನಲ್ಲಿ ಜೆಡಿಎಸ್ ಬೆಂಬಲ ಕೋರಿಲ್ಲ: ಸೋಮಶೇಖರ್
ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿರುವ ಬಿಜೆಪಿ, ಡಿ.10ರಂದು ನಡೆಯಲಿರುವ ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದೆ.
Published: 01st December 2021 07:41 AM | Last Updated: 01st December 2021 01:01 PM | A+A A-

ಸೋಮಶೇಖರ್
ಮೈಸೂರು: ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿರುವ ಬಿಜೆಪಿ, ಡಿ.10ರಂದು ನಡೆಯಲಿರುವ ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದೆ.
ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಪ್ರತಿಕ್ರಿಯೆ ನೀಡಿ, ಪಕ್ಷ ಸಂಘಟಿತವಾಗಿ ಕೆಲಸ ಮಾಡುತ್ತಿದ್ದು, ಎಲ್ಲಾ ಪಂಚಾಯಿತಿ ಸದಸ್ಯರನ್ನೂ ತಲುಪಲಿದೆ. ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಿಗುವುದು ಖಚಿತ ಎಂದು ಹೇಳಿದ್ದಾರೆ.
ಇದೇ ವೇಳೆ ಎರಡನೇ ಪ್ರಾಶಸ್ತ್ಯದ ಮತಗಳನ್ನು ಬಿಜೆಪಿಗೆ ಹಾಕದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪಂಚಾಯತ್ ಸದಸ್ಯರಿಗೆ ಕರೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿ, ಮೂರೂ ಪಕ್ಷಗಳ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳನ್ನು ಕೇಳುತ್ತಿದ್ದಾರೆಂದು ತಿಳಿಸಿದ್ದಾರೆ.
"ಪಂಚಾಯತ್ ಸದಸ್ಯರು ಪ್ರಬುದ್ಧರಾಗಿದ್ದಾರೆ ಮತ್ತು ಶೇಕಡಾ 70 ಕ್ಕಿಂತ ಹೆಚ್ಚು ಯುವಕರು ಪರಿಷತ್'ಗೆ ಯಾರನ್ನು ಆಯ್ಕೆ ಮಾಡಬೇಕೆಂದು ನಿರ್ಧರಿಸಲಿದ್ದಾರೆ ಎಂದು ಹೇಳಿದರು.
ಬಳಿಕ ಡಿ.5ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಭಯ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿ ಆರ್.ರಘು ಪರ ಪ್ರಚಾರ ನಡೆಸಲಿದ್ದಾರೆ.ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ಹುಣಸೂರು ತಾಲೂಕುಗಳಲ್ಲಿ ಪ್ರವಾಸ ಕೈಗೊಂಡು ಪ್ರಚಾರ ನಡೆಸಲು 15 ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಯಾವೆಲ್ಲಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲವೋ ಆ ಕ್ಷೇತ್ರದಲ್ಲಿ ಪಕ್ಷಕ್ಕೆ ಬೆಂಬಲ ನೀಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಮನವಿ ಮಾಡಿಕೊಂಡಿದ್ದಾರಷ್ಟೇ, ಮೈಸೂರಿನಲ್ಲಿ ಜೆಡಿಎಸ್ ಬೆಂಬಲ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.