NonSense ಪ್ರಧಾನಿ ಭೇಟಿ ಮಾಡಲು ಅನುಮತಿ ಬೇಕೆ: ಸಿದ್ದರಾಮಯ್ಯನಿಗೆ ನನ್ನ ಪಕ್ಷವನ್ನು ಸರಂಡರ್ ಮಾಡಿದ್ದೀವಾ?

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಅನುಮತಿ ಬೇಕೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಎಚ್​.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಅನುಮತಿ ಬೇಕೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಎಚ್​.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.

ವಿಧಾನ ಪರಿಷತ್​ ಚುನಾವಣೆ ಹಿನ್ನೆಲೆ ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು  ಶಿಡ್ಲಘಟ್ಟ ಬಾಲಾಜಿ ಕನ್ವೆವೆನ್ಷನ್ ಹಾಲ್ ನಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತಯಾಚಿಸಿದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಏಳೆಂಟು ಬಾರಿ ಭೇಟಿಯಾಗಿದ್ದೇನೆ. ಈ ಹಿಂದೆ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 10 ಬಾರಿ ಭೇಟಿಯಾಗಿದ್ದೆ. ಮೋದಿ ಅವರನ್ನು ಭೇಟಿಯಾದ ತಕ್ಷಣ ಜೆಡಿಎಸ್​​ ಅವರಿಗೆ ಒಪ್ಪಿಸಿದಂತೆ ಆಗುತ್ತದೆಯೇ? ಎಂಥ ಮೂರ್ಖತನದ ಮಾತು ಎಂದು ಆಕ್ಷೇಪಿಸಿದರು.

ವಾಜಪೇಯಿ ಅವರನ್ನು ಭೇಟಿ ಮಾಡಿದ್ದೇನೆ.  ಸಿದ್ದರಾಮಯ್ಯನಿಗೆ ನನ್ನ ಪಕ್ಷವನ್ನು ಸರಂಡರ್ ಮಾಡ್ತೀವಿ ಅಂತ ಹೇಳಿದ್ದೀವಾ ನಾನ್ಸೆನ್ಸ್ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.  ಕುಮಾರಸ್ವಾಮಿಯವರು ನನ್ನ ಅನುಮತಿ ಇಲ್ಲದೆ ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದರು. ಮುಖ್ಯಮಂತ್ರಿ ಮಾಡಿ ಸರ್ಕಾರ ಕೆಡವಿದವರು ಯಾರು ಉತ್ತರ ಕೊಡಲಿ ಎಂದು ಕಾಂಗ್ರೆಸ್ಸಿಗರ ವಿರುದ್ಧ ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com