ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದು, ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಎಂದು ಪ್ರಶ್ನಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದು, ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಎಂದು ಪ್ರಶ್ನಿಸಿದ್ದಾರೆ.

ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಹೆಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ.

ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ; ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ʼಗಳು!! 'ಸಿದ್ದಸೂತ್ರಧಾರʼನಿಗೆ ಇದೆಲ್ಲ ಗೊತ್ತಿಲ್ಲವೇ?

ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com