ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ; ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

ಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಚಿಕ್ಕಮಗಳೂರು: ಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ 2ನೇ ಅಲೆ ವೇಳೆ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂತ್ರಸ್ತರಿಗೆ ಸರ್ಕಾರ ಇನ್ನೂ ಪರಿಹಾರ ಬಿಡುಗಡೆ ಮಾಡಬೇಕಿದೆ. ಮರಣ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆಂದು ಆರೋಪಿಸಿದ್ದಾರೆ.

ಬಳಿಕ ರಾಜ್ಯದ ಓಮಿಕ್ರಾನ್ ಸ್ಥಿತಿ ಕುರಿತು ಮಾತನಾಡಿ, ಓಮಿಕ್ರಾನ್ ತಡೆಯಲು ರಾಜ್ಯ ಸರ್ಕಾರ ಅಂತರಾಷ್ಟ್ರೀಯ ವಿಮಾನಗಳ ಮೇಲೆ ರದ್ದು ಹೇರುವುದು ಮುಖ್ಯವಾಗಿದೆ ಎಂದು ಸಲಹೆ ನೀಡಿದ್ದಾರೆ.

ಇದೇ ವೇಳೆ ಕಾಮಗಾರಿ ಮಂಜೂರಾತಿಗೆ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಪತ್ರ ಬರೆದಿರುವ ಕುರಿತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ರಾಜ್ಯ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com