ಪೊಲೀಸ್ ಅಧಿಕಾರಿಗಳ ಕುರಿತು ಟೀಕೆ: ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿ
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ಅಧಿಕಾರಿಗಳ ಕುರಿತು ಟೀಕೆ ಮಾಡಿದ್ದನ್ನು ಗುರಿಯಾಗಿಸಿಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದಾರೆ.
Published: 05th December 2021 08:42 AM | Last Updated: 05th December 2021 08:42 AM | A+A A-

ಸಿದ್ದರಾಮಯ್ಯ
ಬೆಂಗಳೂರು/ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ಅಧಿಕಾರಿಗಳ ಕುರಿತು ಟೀಕೆ ಮಾಡಿದ್ದನ್ನು ಗುರಿಯಾಗಿಸಿಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರಾಗಿ ಆರಗ ಜ್ಞಾನೇಂದ್ರ ಅವರು ಅಧಿಕಾರ ಸ್ವೀಕರಿದ ದಿನದಿಂದಲೂ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ತರುವಲ್ಲಿ ವಿಫಲರಾಗಿದ್ದಾರೆಂದು ಕಿಡಿಕಾರಿದ್ದಾರೆ.
ಅವರಿಗೆ ನಿರ್ವಹಣೆ ಮಾಡಲು ಆಗದೇ ಇದ್ದರೆ ರಾಜೀನಾಮೆ ನೀಡಬೇಕು. ಅವರ ಇಲಾಖೆಯಲ್ಲಿ ಭ್ರಷ್ಟಾಚಾರ ಕೊಳೆತು ನಾರುತ್ತಿದೆ ಎನ್ನುವುದು ಮನವರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ಗೃಹ ಸಚಿವ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.