ಬುರುಡೆ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲ ಹುಸಿಯಾಗಿದೆ: ಸಿದ್ದರಾಮಯ್ಯ

 ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿ ತೋರಿಸುತ್ತಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಆ ನಿರೀಕ್ಷೆಗಳೆಲ್ಲ ಈಗ ಹುಸಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿ ತೋರಿಸುತ್ತಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ, ಆ ನಿರೀಕ್ಷೆಗಳೆಲ್ಲ ಈಗ ಹುಸಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬುರುಡೆ ಬೊಮ್ಮಾಯಿ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಚುನಾವಣಾ ಪ್ರಚಾರ ಸಭೆಗಳಲ್ಲಿ ನಿರಂತರ ಸುಳ್ಳು ಹೇಳುವ ಮೂಲಕ ಮುಖ್ಯಮಂತ್ರಿ ಬಿಜೆಪಿ ಪಕ್ಷದ ಮೂಲ ತತ್ವವನ್ನು ಎತ್ತಿ ಹಿಡಿದಿದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೆ ಸತ್ಯವೆಂದು ನಂಬಿಸುವುದು ಬಿಜೆಪಿಯವರ ಹುಟ್ಟುಗುಣವಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಬಗ್ಗೆ ಆಗಾಗ್ಗೆ ಪ್ರಶ್ನೆ ಕೇಳುವ, ಸುಳ್ಳು ಹೇಳುವ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿಯಾಗಿದ್ದು ಮಾಹಿತಿ ತರಿಸಿಕೊಳ್ಳಲು ಕಷ್ಟವಾಗುತ್ತಿದೆಯೇ ಅಥವಾ ಮುಖ್ಯಮಂತ್ರಿ ಕೇಳಿದರೂ ಇಲಾಖೆಗಳು ಮಾಹಿತಿ ನೀಡುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

2013ರಿಂದ 2018ರ ಮಾರ್ಚ್ ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 16, 775 ಕೋಟಿ ರೂ. ವೆಚ್ಚದಲ್ಲಿ 15 ಲಕ್ಷ ಮನೆಗಳನ್ನು ವಸತಿ ರಹಿತರಿಗೆ ನಿರ್ಮಾಣ ಮಾಡಿಕೊಟ್ಟಿದೆವು. ಈ ಮಾಹಿತಿಯನ್ನು ವಸತಿ ಸಚಿವ ವಿ. ಸೋಮಣ್ಣ ಅವರ ಕಚೇರಿಯಿಂದಲೇ ಲಿಖಿತವಾಗಿ ಕಳುಹಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com