ಬಿಜೆಪಿಗೆ ಬೆಂಬಲ ಕೊಡಲಿಲ್ಲವೆಂದು ನನ್ನನ್ನು ಜೈಲಿಗೆ ಕಳಿಸಿದ್ದರು: ಡಿ.ಕೆ.ಶಿವಕುಮಾರ್

ಬಿಜೆಪಿಗೆ ಬೆಂಬಲ ನೀಡಲಿಲ್ಲ, ಬಿಜೆಪಿಗೆ ಸೇರಲಿಲ್ಲವೆಂಬ ಕಾರಣಕ್ಕೆ ನನ್ನನ್ನು ಜೈಲಿಗೆ ಕಳುಹಿಸಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಸೋಮವಾರ ಆರೋಪಿಸಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಳಗಾವಿ: ಬಿಜೆಪಿಗೆ ಬೆಂಬಲ ನೀಡಲಿಲ್ಲ, ಬಿಜೆಪಿಗೆ ಸೇರಲಿಲ್ಲವೆಂಬ ಕಾರಣಕ್ಕೆ ನನ್ನನ್ನು ಜೈಲಿಗೆ ಕಳುಹಿಸಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಸೋಮವಾರ ಆರೋಪಿಸಿದ್ದಾರೆ.

ಡಿಕೆ.ಶಿವಕುಮಾರ್ ಅವರು ತಿಹಾರ್ ಜೈಲಿಗೆ ಯಾಕೆ ಹೋಗಿದ್ದರೆಂದು ಹೇಳಿದ್ದ ಸಚಿವ ಕೆಎಸ್ ಈಶ್ವರಪ್ಪ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜೈಲಿಗೆ ಯಾಕೆ ಹೋದೆ ಅಂದ್ರೆ ನೀವು ಕಳಿಸಿದ್ರಿ ನಾನು ಹೋದೆ. ನಿಮಗೆ ಸಪೋರ್ಟ್ ಮಾಡಲಿಲ್ಲ, ನಿಮ್ಮ ಜೊತೆ ಬರಲಿಲ್ಲ. ಹೀಗಾಗಿ ನೀವು ನನ್ನನ್ನು ತಿಹಾರ್ ಜೈಲಿಗೆ ಕಳಿಸಿದ್ರಿ ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಉಸಿರು ನಿಲ್ಲಿಸುತ್ತೇವೆ ಎಂಬ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದ ಅವರು. ಬಿಎಸ್​ವೈ ತಮಗಾದ ನೋವನ್ನು ಬಿಜೆಪಿ ಮೇಲೆ ಹೇಳಲಾಗಲ್ಲ. ಅವರ ದುಃಖ, ದುಮ್ಮಾನ, ರೇಡ್, ಮಾನಸಿಕ ಹಿಂಸೆ ರಾಜೀನಾಮೆಯ ನೋವನ್ನು ಹೊರಹಾಕಬೇಕು. ನಾವು ಫ್ರೀಯಾಗಿದೀವಿ ಎಂದು ನಮ್ಮ ಮೇಲೆ ಹಾಕುತ್ತಿದ್ದಾರೆ. ನಮ್ಮನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಕೂರಿಸಲಿ. ಸರ್ಕಾರದ ಸ್ಥಿರತೆಯನ್ನು ನಾವು ಹಾಳು ಮಾಡುತ್ತಿಲ್ಲ. ಅವರ ಪಕ್ಷದವರೇ ಹಾಳು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com