ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಯಿಲ್ಲ; 2023ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ: ಎಚ್.ಡಿ ಕೆ

ಡಿಸೆಂಬರ್ 10 ರಂದು ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಡಿಸೆಂಬರ್ 10 ರಂದು ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಪರಿಷತ್ ಚುನಾವಣೆ ಅಂತಿಮ ಘಟ್ಟ ತಲುಪಿದೆ, ಹೀಗಾಗಿ ನಮ್ಮ ನಿಲುವನ್ನು ಪ್ರಕಟಿಸುತ್ತಿರುವುದಾಗಿ ಹೇಳಿದರು. ಜೆಡಿಎಸ್- ಬಿಜೆಪಿ ಮೈತ್ರಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಮಾಧ್ಯಮಗಳಲ್ಲಿ ಸುದ್ಧಿಗಳು ಹರಿದಾಡುತ್ತಿದ್ದುದ್ದಾಗಿ ಅವರು ಹೇಳಿದರು.

ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಕಾಂಗ್ರೆಸ್ ನವರು ರಾಜಕೀಯ ಮಂತ್ರ ಜಪಿಸುತ್ತಿದ್ದಾರೆ, ಜೊತೆಗೆ ಜೆಡಿಎಸ್ ಕುಟುಂಬದ ಪಕ್ಷ ಎಂಬ ಆರೋಪವು ಕೇಳಿ ಬರುತ್ತಿದೆ. ಹೀಗಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಪರಿಷತ್ ಚುನಾವಣೆಗೆ ಬಿಜೆಪಿಯವರು ನಮ್ಮ ಬೆಂಬಲ ಕೋರಿಲ್ಲ, ಆದರೆ ಎಲ್ಲಿ ಜೆಡಿಎಸ್ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲವೋ, ಅಲ್ಲಿ ಜೆಡಿಎಸ್ ಬೆಂಬಲ ನೀಡಲಿ ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು,  ಅದರ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ಕೂಡ ಸ್ಪಷ್ಟನೆ ನೀಡಿದ್ದರು.

ನಾವು ಸ್ಪರ್ಧಿಸಿರುವ ಆರು ಕ್ಷೇತ್ರದಲ್ಲಿ ಮೂರು ಪಕ್ಷಗಳ ನಡುವೆ ತ್ರಿಕೋನ ಹೋರಾಟ ನಡೆಯಲಿದೆ, ನಾವು ಯಾವುದೇ ಪಕ್ಷದ ಜೊತೆ ಹೊಂದಾಣಿಕೆಯಲ್ಲ, ಆರು ಕ್ಷೇತ್ರಗಳಲ್ಲಿ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com