ವಿಧಾನ ಪರಿಷತ್ ಚುನಾವಣೆ: ರಾಜಕೀಯ ಪಕ್ಷಗಳ 'ಫ್ರೆಂಡ್ಲಿ ಡೀಲ್ಸ್'!

ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರುಗಳು ಫ್ರೆಂಡ್ಲಿ ಡೀಲ್ ಮಾಡಿಕೊಂಡಿವೆ.
ಕೋನರೆಡ್ಡಿ
ಕೋನರೆಡ್ಡಿ

ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರುಗಳು ಫ್ರೆಂಡ್ಲಿ ಡೀಲ್ ಮಾಡಿಕೊಂಡಿವೆ.

ಜೆಡಿಎಸ್ ಮಾಜಿ ಶಾಸಕ ಕೋನರೆಡ್ಡಿ ಬಹಿರಂಗವಾಗಿಯೇ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಪರ ಧಾರವಾಡದಲ್ಲಿ ಪ್ರಚಾರ ನಡೆಸಿದ್ದಾರೆ. ಈ ಸಂಬಂಧ ಅವರು ಟೀಕೆಗಳನ್ನು ಎದುರಿಸಿದರೂ ಯಾವುದಕ್ಕೂ ಸೊಪ್ಪು ಹಾಕಲಿಲ್ಲ.

‘ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಸಲೀಂ ಅಹ್ಮದ್‌ ಪರವಾಗಿ ಜೆಡಿಎಸ್ ಕಾರ್ಯಕರ್ತರು ಪ್ರಚಾರ ನಡೆಸಿದ್ದಾರೆ.

ಈ ಕ್ಷೇಥ್ರದಲ್ಲಿ ಒಂದು ಸಾವಿರದಷ್ಟು ಪಂಚಾಯಿತಿ ಸದಸ್ಯರು ಜೆಡಿಎಸ್‌ ಬೆಂಬಲಿತರಾಗಿದ್ದಾರೆ. ಅವರೆಲ್ಲರ ಮತ ಸಲೀಂ ಅವರಿಗೇ ಚಲಾಯಿಸುವಂತೆ ವಿನಂತಿಸಲಾಗಿದೆ ಎಂದು ಕೋನರೆಡ್ಡಿ ತಿಳಿಸಿದ್ದಾರೆ. ಜಾತ್ಯಾತೀತ ಶಕ್ತಿಗಳು ಒದಾಗಬೇಕೆಂಬ ಹಿನ್ನೆಲೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ನಮ್ಮ ಪಕ್ಷದ ಸುಮಾರು 1 ಸಾವಿರ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಕೋನರೆಡ್ಡಿ ತಿಳಿಸಿದ್ದಾರೆ.

ಇನ್ನೂ ಇದೇ ರೀತಿ ಚಿಕ್ಕಮಗಳೂರಿನಲ್ಲಿಯೂ ನಡೆದಿದೆ,  ಜೆಡಿಎಸ್ ಎಂಎಲ್ ಸಿ ಭೋಜೇಗೌಡ ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಪರ ಪ್ರಚಾರ ನಡೆಸಿದ್ದಾರೆ.  ತುಮಕೂರಿನಲ್ಲಿ ಲೋಕಸಭಾ ಸದಸ್ಯ ಜಿ.ಎಸ್ ಬಸವರಾಜು ಮತ್ತು ಮಾಜಿ ಶಾಸಕ ಕಿರಣ್ ಕುಮಾರ್ ಅವರು ಕಾಂಗ್ರೆಸ್ ನ ಮಾಜಿ ಶಾಸಕ ಕೆಎನ್ ರಾಜಣ್ಣ ಪುತ್ರ ರಾಜೇಂದ್ರ ಅವರಿಗೆ ಬೆಂಬಲ ನೀಡಿದ್ದಾರೆ.

ಸಚಿವ ಜೆ.ಸಿ ಮಾಧುಸ್ವಾಮಿ ಈಗಾಗಲೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿರುವಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಕಿರಣ್ ಕುಮಾರ್ ವ್ಯಂಗ್ಯವಾಡಿದ್ದರು.

2018 ರ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮಾಧುಸ್ವಾಮಿಗೆ ಪಕ್ಷದ ಟಿಕೆಟ್‌ಗಾಗಿ ಕಿರಣ್ ಅವರನ್ನು ಕಡೆಗಣಿಸಿದ್ದರಿಂದ  ಇಬ್ಬರ ನಡುವೆ ಶೀತಲ ಸಮರ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com