

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಕಣ ರಂಗೇರಿದ್ದು ಚುನಾವಣೆಯಲ್ಲಿ ಗೆಲ್ಲಲು ಪಕ್ಷಗಳು ನಾನಾ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಪರಿಷತ್ ಚುನಾವಣೆ ಹಿನ್ನೆಲೆ ಆಪರೇಷನ್ ಆಟ ಶುರುವಾಗಿದೆ.
ಬೆಳಗ್ಗೆ ಬಿಜೆಪಿ ಸೇರ್ಪಡೆಯಾಗಿದ್ದವರು ಸಂಜೆ ಮತ್ತೆ ಕಾಂಗ್ರೆಸ್ ಗೆ ವಾಪಾಸಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಒಂದೇ ದಿನದಲ್ಲಿ 2 ಬಾರಿ ಪಕ್ಷ ಬದಲಿಸಿದ್ದಾರೆ. ಬೆಳಿಗ್ಗೆ ಆಪರೇಶನ್ ಬಿಜೆಪಿ ಆದ್ರೆ ಸಂಜೆ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.
ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಿನ್ನೆ ಬೆಳಗ್ಗೆ ನಡೆದ ಬಿಜೆಪಿ ಎಂಎಲ್ಸಿ ಬಿಜೆಪಿ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಸಾಗರ ಶಾಸಕ ಹರತಾಳು ಹಾಲಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯೆ ಪೂರ್ಣಿಮಾ ಬಿಜೆಪಿ ಸೇರಿದ್ದರು.
ಸಂಜೆಯಾಗುವಷ್ಟರಲ್ಲಿ ಮತ್ತೆ ಮರಳಿ ಕಾಂಗ್ರೆಸ್‌ಗೆ ಸೇರಿದ್ದಾರೆ. ಮಾಜಿ ಶಾಸಕ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ವಾಪಸ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ನನಗೆ ರಾಜಕೀಯದ ತಿಳಿವಳಿಕೆ ಅಷ್ಟಾಗಿ ಇಲ್ಲ. ನನ್ನನ್ನು ಗ್ರಾ.ಪಂ. ಸದಸ್ಯರ ಕಾರ್ಯಕ್ರಮವಿದೆ ಎಂದು ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ನನಗೆ ಶಾಲು ಹಾಕಿಸಲಾಯಿತು. ಬಳಿಕವೇ ನನಗೆ ಈ ಬಗ್ಗೆ ಗೊತ್ತಾಗಿದ್ದು ಎಂದು ಪೂರ್ಣಿಮಾ ಅವರು ತಿಳಿಸಿದ್ದಾರೆ. ಅಲ್ಲದೇ ನಾನು ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿರುವುದರಿಂದ ನಾನು ಪುನಃ ಕಾಂಗ್ರೆಸ್‌ಗೆ ಮರಳಿದ್ದೇನೆ ಎಂದು ಪೂರ್ಣಿಮಾ ತಿಳಿಸಿದ್ದಾರೆ.
ಪೂರ್ಣಿಮಾ ಅವರು ಅರಿವಿಲ್ಲದೆ ಬಿಜೆಪಿ ಸೇರಿದ್ದಾರೆ. ಹೀಗಾಗಿ ನಾನು ಕಾಂಗ್ರೆಸ್ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಅವರ ಬಳಿ ಮಾತನಾಡು ಪಕ್ಷಕ್ಕೆ ಮರಳಿ ಸ್ವಾಗತಿಸುವಂತೆ ವಿನಂತಿಸಿದೆ. ಅದೇ ಸಂಜೆ ಅವರನ್ನು ಕಾಂಗ್ರೆಸ್ ಗೆ ಸ್ವಾಗತಿಸಲಾಯಿತು ಎಂದು ಅರಸಾಳು ಜಿ.ಪಂ.ಅಧ್ಯಕ್ಷ ಉಮಾಕರ್ ತಿಳಿಸಿದ್ದಾರೆ.
Advertisement