ಸರ್ಕಾರ ಮನಸ್ಸು ಮಾಡಿದ್ರೆ ಏನು ಬೇಕಾದ್ರು ಮಾಡಬಹುದು ಎಂಬುದಕ್ಕೆ ಕಾಶಿ ವಿಶ್ವನಾಥನ ಕಾರಿಡಾರ್ ಸಾಕ್ಷಿ: ಸಿಎಂ ಬೊಮ್ಮಾಯಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸ್ಥಾನ ಪಡೆದು ಗೆಲ್ಲಲಿದೆ, ಪಕ್ಷಕ್ಕೆ ಉತ್ತಮ ಫಲಿತಾಂಶ ದೊರಕಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಜೊತೆಗೆ
ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿ ಜೊತೆಗೆ
Updated on

ಕಾಶಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸ್ಥಾನ ಪಡೆದು ಗೆಲ್ಲಲಿದೆ, ಪಕ್ಷಕ್ಕೆ ಉತ್ತಮ ಫಲಿತಾಂಶ ದೊರಕಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraja Bommai) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಶಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಧಾನ ಪರಿಷತ್​ನ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶದ ನಿರೀಕ್ಷೆಯಲ್ಲಿದ್ದೇವೆ ಎಂದರು.

ಬೆಳಗಾವಿಯಲ್ಲಿ ನಿನ್ನೆ ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಂಡ ನಂತರ ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಪತ್ನಿಯ ಜೊತೆಗೂಡಿ ಕಾಶಿಗೆ ತೆರಳಿದ್ದರು. ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಕಾಶಿ ವಿಶ್ವನಾಥ ಕಾರಿಡಾರ್ (Kashi Vishwanath corridor) ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಪತ್ನಿ ಜತೆ ಕಾಶಿ ವಿಶ್ವನಾಥನ ದರ್ಶನ ಮಾಡಿದರು. 

ಇಂದು ಬೆಳಗ್ಗೆ ಕಾಶಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಶಿ ವಿಶ್ವನಾಥ ಕಾರಿಡಾರ್ ಅದ್ಭುತವಾಗಿದೆ ಪ್ರಧಾನಿ ಮೋದಿಯವರ ದೂರದೃಷ್ಟಿ ಮತ್ತು ಕೆಲಸವನ್ನು ಪೂರ್ಣಗೊಳಿಸಿರುವ ರೀತಿ ಸರ್ಕಾರ ಮನಸ್ಸು ಮಾಡಿದರೆ ಏನು ಬೇಕಾದ್ರು ಮಾಡಬಹುದು ಎಂಬುದಕ್ಕೆ ಕಾಶಿ ವಿಶ್ವನಾಥನ ಕಾರಿಡಾರೇ ಸಾಕ್ಷಿಯಾಗಿದೆ. ಡಬಲ್ ಇಂಜಿನ್ ಸರ್ಕಾರವಿದ್ದರೆ ಏನೆಲ್ಲ ಕೆಲಸವಾಗುತ್ತೆ ಎನ್ನಲು ಇದೇ ಸಾಕ್ಷಿ. ಕಾಶಿಗೆ ದಕ್ಷಿಣ ಭಾರತದವರು ತುಂಬಾ ಜನ ಬರುತ್ತಾರೆ. ಅವರಿಗೆ ಬಹಳ‌ ಸಂತೋಷವಾಗಲಿದೆ. ಇವತ್ತು ಪ್ರಧಾನಿ ಜೊತೆ ಸಿಎಂಗಳ ಸಭೆಯಲ್ಲಿ ಅಭಿವೃದ್ಧಿ ವಿಚಾರ ಚರ್ಚೆಯಾಗಲಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com