ಬೆಳಗಾವಿ ಪರಿಷತ್ ನಲ್ಲಿ ಮುದುಡಿದ ಕಮಲ: ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಜಯಭೇರಿ
ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ.
Published: 14th December 2021 01:38 PM | Last Updated: 14th December 2021 02:13 PM | A+A A-

ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ.
ಬೆಳಗಾವಿಯಲ್ಲಿ ಸ್ಪರ್ಧಿಸಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
#MLCElection
— Naushad Bijapur (@naushadbijapur) December 14, 2021
Chennaraj Hattiholi of Cong and
Independent Lakhan Jarkiholi win from Belagavi in MLC elections. BJP's Kavatgimath loses. @XpressBengaluru @ramupatil_TNIE @allaboutbelgaum
ಬೆಳಗಾವಿಯ ಪರಿಷತ್ ಕದನದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ಉಂಟಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವು ಸಾಧಿಸುವ ಮೂಲಕ, ಮೂರನೇ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರು ಸೋಲು ಕಂಡಿದ್ದಾರೆ. ಎರಡನೇ ಪ್ರಾಶಸ್ತ್ಯದ ಮತ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರಿಗೆ ದೊರೆತಿದೆ.