12 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆಯಿತ್ತು; ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಳಗಾವಿ (ಸುವರ್ಣ ವಿಧಾನಸೌಧ): ರಾಜ್ಯದ ವಿಧಾನಪರಿಷತ್ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೂ 11 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಗಣನೀಯ ಸಾಧನೆ ಮಾಡಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ತಿಳಿಸಿದರು.
ಅವರಿಂದು ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಿಕ್ಕಮಗಳೂರಲ್ಲಿ ಗಾಯತ್ರಿ ಅವರಿಗೆ 4 ಮತಗಳ ಅಂತರದಿಂದ ಸೋಲಾಗಿದೆ. ಆ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಗೆಲ್ತೇವೆ ಎಂದು ಭಾವಿಸಿದ್ದೇವು. ಆ ಒಂದು ಕ್ಷೇತ್ರದಲ್ಲಿ ಮಾತ್ರ ನಿರೀಕ್ಷೆ ಹುಸಿಯಾಗಿದೆ. ಉಳಿದ ಕಡೆ ಬಹಳ ಸ್ಪರ್ಧೆ ನೀಡಿದ್ದೇವೆ ಎಂದರು.
ನಾನು ಗಾಯತ್ರಿ ಅವರಿಗೆ ಕರೆ ಮಾತನಾಡಿದ್ದೇನೆ. ವಕೀಲರನ್ನು ಸಂಪರ್ಕ ಮಾಡಿ ಎಂದು ಹೇಳಿದ್ದೇವೆ. ನಾಮ ನಿರ್ದೇಶನ ಅಭ್ಯರ್ಥಿಗಳ ಮತದಾನ ಮಾಡುವ ವಿಚಾರಕ್ಕಾಗಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ವಿವರಿಸಿದರು.
ಇದು ಜನರ ತೀರ್ಪು ಅಲ್ಲ. ಸ್ಥಳೀಯ ನಾಯಕ ಅಭಿಪ್ರಾಯ. ಆದರೂ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ ಎಂದು ಅಭಿಪ್ರಾಯಪಟ್ಟ ಅವರು ಬೆಳಗಾವಿಯಲ್ಲಿ ಬಿಜೆಪಿ ಸೋಲು ಖಂಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿಗೆ ಧಮ್ ಇಲ್ಲ ಪಕ್ಷೇತರರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಅವಕಾಶ ಮಾಡಿಕೊಟ್ಟಿದ್ದರು. ನಮ್ಮ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದಲ್ಲಿ ಜಯಗಳಿಸಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ