ಮುದುಕಿಗೆ ಶೃಂಗಾರ ಮಾಡುವುದನ್ನು ಬಿಡಿ; ಮನೆ- ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡಿ; ಶಾಸಕರ ಮರ್ಯಾದೆ ಉಳಿಸಿ!

ಪ್ರವಾಹದಿಂದ ಮನೆ ಹಾಗೂ ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡಿ ಶಾಸಕರ ಮರ್ಯಾದೆ ಉಳಿಸಿ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಗ್ರಹಿಸಿದರು.
ಶಿವಲಿಂಗೇಗೌಡ
ಶಿವಲಿಂಗೇಗೌಡ

ಬೆಳಗಾವಿ: ಪ್ರವಾಹದಿಂದ ಮನೆ ಹಾಗೂ ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡಿ ಶಾಸಕರ ಮರ್ಯಾದೆ ಉಳಿಸಿ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಗ್ರಹಿಸಿದರು.

ಪ್ರವಾಹದ ಮೇಲಿನ ವಿಷಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಳೆ ಹಾನಿಯಿಂದ ರೈತರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ನಮ್ಮ ಮನೆಯ ಮುಂದೆ ಬಂದು ನಿಲ್ಲುತ್ತಿದ್ದಾರೆ. ನಾವು ಸರ್ಕಾರದ ಕಡೆಗೆ ತೋರಿಸುತ್ತೇವೆ. ಯಾವುದೇ ಎನ್ ಡಿ ಆರ್ ಎಫ್ ನಿಯಮಗಳನ್ನು ಅನುಸರಿಸದೆ ಅವರು ಖರ್ಚು ಮಾಡಿರುವ ಹಣವನ್ನಾದರೂ ಪರಿಹಾರ ನೀಡಿ ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದಿಂದಲೂ ರಾಜ್ಯಕ್ಕೆ ಹೆಚ್ಚಿನ ಪರಿಹಾರದ ಹಣ ಬರಬೇಕಿದೆ. ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಹಣ ಹೋಗುತ್ತಿದೆ. ಕೇಂದ್ರ ಸರ್ಕಾರ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 39 ಸಾವಿರ ಬರಬೇಕಿತ್ತು, ಆದರೆ 30 ಸಾವಿರ ಕೋಟಿ ಮಾತ್ರ ಬಂದಿದೆ. ಕೇಂದ್ರದಿಂದ ಹೆಚ್ಚಿನ ಪರಿಹಾರ ತರುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಪೊಲೀಸ್‌ ಇಲಾಖೆ ವತಿಯಿಂದ ಕಟ್ಟಡ ರಿಪೇರಿಗಾಗಿ ಅನಗತ್ಯ ಹಣ ಪೋಲು ಮಾಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ಕಟ್ಟಡ ನವೀಕರಣಕ್ಕೆ ಪೊಲೀಸ್‌ ಇಲಾಖೆಯಿಂದ ಅನಗತ್ಯ ಹಣ ಖರ್ಚು ಮಾಡಲಾಗುತ್ತಿದೆ. ಮುದುಕಿಗೆ ಶೃಂಗಾರ ಮಾಡುವುದನ್ನು ಬಿಟ್ಟು ಬಿಡಿ ಎಂದು ಹೇಳಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com