ಪಕ್ಷದ ವರ್ಚಸ್ಸು ಹಾಳು ಮಾಡಲು ತಿರುಚಿದ ವಿಡಿಯೋ ಹರಿಬಿಡಲಾಗಿದೆ: ಬಿಜೆಪಿ ವಿರುದ್ಧ ಸಿಎಂ ಇಬ್ರಾಹಿಂ ಕಿಡಿ

ತಿರುಚಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಕಾಂಗ್ರೆಸ್ ವರ್ಚಸ್ಸನ್ನು ಹಾಳು ಮಾಡಲು ಯತ್ನಿಸಲಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ಅವರು ಹೇಳಿದ್ದಾರೆ.
ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ

ಬೆಂಗಳೂರು: ತಿರುಚಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಕಾಂಗ್ರೆಸ್ ವರ್ಚಸ್ಸನ್ನು ಹಾಳು ಮಾಡಲು ಯತ್ನಿಸಲಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ಅವರು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ನಡುವಿನ ಮಾತಿನ ಚಕಮಕಿ ವಿಡಿಯೋ ಕ್ಲಿಪ್'ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.'

ಈ ವಿಡಿಯೋ ಸಂಬಂಧ  ಪ್ರತಿಕ್ರಿಯೆ ನೀಡಿರುವ ಸಿಎಂ ಇಬ್ರಾಹಿಂ ಅವರು, ಸಭೆಯಲ್ಲಿ ಸಿದ್ದರಾಮಯ್ಯ ಅವರಿಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಹೇಳಿದ್ದ ಮಾತುಗಳನ್ನು ತಿಳಿಸುತ್ತಿದ್ದೆ. ಈ ವಿಡಿಯೋವನ್ನು ಬಿಜೆಪಿ ತಿರುಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದೆ. ಈ ಮೂಲಕ ಕಾಂಗ್ರೆಸ್ ನಾಯಕರ ನಡುವೆ ಯಾವುದೂ ಸರಿಯಿಲ್ಲ ಎಂದು ಬಿಂಬಿಸಲು ಯತ್ನಿಸಿದೆ ಎಂದು ಹೇಳಿದ್ದಾರೆ.

ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಮಂಡಿಸುತ್ತಿರುವ ಮತಾಂತರ ವಿರೋಧಿ ಮಸೂದೆಯನ್ನು ಸರ್ವಾನುಮತದಿಂದ ವಿರೋಧಿಸಲು ನಿರ್ಧರಿಸಲಾಗಿದೆ. ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸುವ ಏಕೈಕ ಉದ್ದೇಶದಿಂದ ಬಿಜೆಪಿ ಮಸೂದೆಯನ್ನು ತರುತ್ತಿದೆ. ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಮಸೂದೆ ಮಂಡಿಸುತ್ತಿದ್ದು, ಇದನ್ನು ವಿರೋಧಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. "ಆಡಳಿತ ಪಕ್ಷವು ಭಾವನಾತ್ಮಕ ಆಧಾರದ ಮೇಲೆ ಈ ವಿವಾದಾತ್ಮಕ ಮಸೂದೆಯನ್ನು ತರಲು ಉತ್ಸುಕವಾಗಿದೆ ಮತ್ತು ಅಮಾಯಕ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ" ಎಂದು ತಿಳಿಸಿದ್ದಾರೆ.

ಈ ನಡುವೆ ಸಭೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವರು, ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು, ರಾಜ್ಯದ ವಿವಿಧೆಡೆ ಲಕ್ಷಾಂತರ ಮನೆಗಳಿಗೆ ಹಾನಿಯಾಗಿದ್ದರೂ ಸರ್ಕಾರ ಪರಿಹಾರ ನೀಡಲು ವಿಳಂಬ ಮಾಡುತ್ತಿದೆ ಎಂದು ಹೇಳಿದ್ದಾರೆ.

"ರಾಜ್ಯವು ನಾಲ್ಕು ಬಾರಿ ಮನವಿ ಮಾಡಿದ ನಂತರವೂ ಕೇಂದ್ರವು ಪ್ರವಾಹ-ಪರಿಹಾರ ಉಪಕ್ರಮಗಳಿಗೆ ಹಣವನ್ನು ಬಿಡುಗಡೆ ಮಾಡಿಲ್ಲ. ಈ ಕುರಿತು ಪ್ರತಿಭಟಿಸಲು ಇದು ಸಕಾಲವಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com