ಲಕ್ಷ್ಮೀ ಹೆಬ್ಬಾಳಕರ್
ಲಕ್ಷ್ಮೀ ಹೆಬ್ಬಾಳಕರ್

ರಾಯಣ್ಣ ಪ್ರತಿಮೆ ವಿರೂಪ: ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ - ಮೌನ ಮುರಿದ ಲಕ್ಷ್ಮಿ ಹೆಬ್ಬಾಳ್ಕರ್‌

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ಮಹಾಪುರುಷರ ಪ್ರತಿಮೆಗೆ ಕಪ್ಪು‌ಮಸಿ...

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ಮಹಾಪುರುಷರ ಪ್ರತಿಮೆಗೆ ಕಪ್ಪು‌ಮಸಿ, ಪ್ರತಿಮೆ ಕೆಡವಿರುವ ಘಟನೆಗಳನ್ನು ಖಂಡಿಸುತ್ತೇನೆ ಎಂದಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕಿ. ಕೆಲವರು ರಾಜಕೀಯ ಬೇಳೆ ಬೇಯಿಸಲು ಈ ರೀತಿ ಮಾಡುತ್ತಿದ್ದಾರೆ. ಸಮಾಜದ, ರಾಜ್ಯದ ಮಧ್ಯೆ ಹೀಗೆ ಮಾಡಿದರೆ, ಒಕ್ಕೂಟ ವ್ಯವಸ್ಥೆ ಹಾಳಾಗುತ್ತದೆ. ಯಾರು ತಪ್ಪಿತಸ್ಥರೋ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಕುರುಬ ಮತ್ತು ಮರಾಠ ಸಮುದಾಯದ ನಾಯಕರ ಜೊತೆ ಸೌಹಾರ್ದಯುತವಾಗಿ ಚರ್ಚೆ ಮಾಡಿದ್ದೇನೆ. ಎಂಇಎಸ್ ನಿಷೇಧ ಬಗ್ಗೆ ಚರ್ಚೆ ಮಾಡ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಕೆಲವರಷ್ಟೆ ಈ ರೀತಿಯ ವರ್ತನೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಎಂಇಎಸ್ ಪುಂಡಾಟಿಕೆ ಬಗ್ಗೆ ಬೆಳಗಾವಿ ಮುಖಂಡರ ಮೌನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂಥವರು ಯಾರನ್ನು ಓಲೈಕೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ.‌ ಆದರೆ ಯಾರು ತಪ್ಪು ಮಾಡಿದ್ದಾರೆ ಅಂಥವರ ಬಗ್ಗೆ ಅವರು ತಪ್ಪು ಮಾಡಿದ್ದಾರೆ ಎಂದು ಹೇಳುವ ದೈರ್ಯ ನನಗೆ ಇದೆ ಎಂದರು.

Related Stories

No stories found.

Advertisement

X
Kannada Prabha
www.kannadaprabha.com