'ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ, 4 ದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ'
ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.
Published: 20th December 2021 12:45 PM | Last Updated: 20th December 2021 01:03 PM | A+A A-

ರಮೇಶ್ ಕುಮಾರ್
ಬೆಳಗಾವಿ: ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.
ಸುವರ್ಣಸೌಧಕ್ಕೆ ಬಂದ ಅವರನ್ನು ಎಂಇಎಸ್ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು, ಮಾಧ್ಯಮಗಳ ಮುಂದೆ ಬಂದ ಬಂದ ಅವರು ಕೈ ಮುಗಿದು ಒಳ ಹೋದರು. ಈ ಸಂದರ್ಭದಲ್ಲಿ ಅವರು “ ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ. ನಾಲ್ಕುದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ” ಎಂದರು.
ಇದನ್ನೂ ಓದಿ: ಸುವರ್ಣಸೌಧ ಪ್ರವೇಶಿಸಲು ಬಿಡಬೇಡಿ, ರಮೇಶ್ ಕುಮಾರ್ ಅವರನ್ನು ಪಕ್ಷದಿಂದ ಕಿತ್ತೊಗೆಯಿರಿ: ಕಾಂಗ್ರೆಸ್ ಗೆ ಶೋಭಾ ಆಗ್ರಹ
ಯಾವುದೇ ಪ್ರಚಲಿತ ವಿಷಯಗಳ ಬಗ್ಗೆ ಉತ್ಸಾಹದಿಂದ ಪ್ರತಿಕ್ರಿಯೆ ನೀಡುತ್ತಿದ್ದ ಅವರು ಈ ರೀತಿ ಮಾತನಾಡಿದ್ದು ಆಶ್ಚರ್ಯ ಉಂಟು ಮಾಡಿತು. ಇದು ಮಾಧ್ಯಮಗಳ ಮೇಲೆ ಅವರಿಗೆ ಉಂಟಾಗಿರುವ ಸಿಟ್ಟಿನ ಸಂಕೇತವೂ ಆಗಿರಬಹುದು ಎಂದು ಹೇಳಲಾಗುತ್ತಿದೆ.
ಸದನದಲ್ಲಿ ಬೆಳೆವಿಮೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಅವರಾಡಿದ ಮಾತುಗಳು ಸಂವೇದನಾಶೀಲರ ಸಿಟ್ಟಿಗೆ ಕಾರಣವಾಗಿತ್ತು. ಪಕ್ಷಬೇಧವಿಲ್ಲದೇ ಎಲ್ಲರೂ ಆ ಮಾತುಗಳನ್ನು ಖಂಡಿಸಿದ್ದರು. ಇದರಿಂದ ಕಾಂಗ್ರೆಸ್ ಕೂಡ ಮುಜುಗರಕ್ಕೆ ಒಳಗಾಗುವ ಸ್ಥಿತಿ ನಿರ್ಮಾಣವಾಗಿತ್ತು.