ರಾಯಣ್ಣ ಪ್ರತಿಮೆ ವಿರೂಪ: ರಾಜ್ಯದಲ್ಲಿ ಎಂಇಎಸ್‌ ನಿಷೇಧಿಸುವಂತೆ ಸಿದ್ದರಾಮಯ್ಯ ಆಗ್ರಹ

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರಕಲಿಗಳು ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರು ಬ್ರಿಟಿಷರ ವಿರುದ್ಧ ಹೋರಾಡಿದ ಅಪ್ರತಿಮ ಕಲಿ. ಅವರು ಸಹ ಒಂದು ಜಾತಿಗೆ ಸೀಮಿತವಾದವರಲ್ಲ....
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಳಗಾವಿ: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರಕಲಿಗಳು ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರು ಬ್ರಿಟಿಷರ ವಿರುದ್ಧ ಹೋರಾಡಿದ ಅಪ್ರತಿಮ ಕಲಿ. ಅವರು ಸಹ ಒಂದು ಜಾತಿಗೆ ಸೀಮಿತವಾದವರಲ್ಲ. ಇಂಥವರ ಪ್ರತಿಮೆಯನ್ನು ವಿರೂಪಗೊಳಿಸಿದವರ ಮೇಲೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಆಗ್ರಹಿಸಿದ್ದಾರೆ.

ಇಂದು ಆನಗೋಳದ ಕನಕದಾಸ ಕಾಲೋನಿಯಲ್ಲಿ ರಾಯಣ್ಣ ಪುತ್ಥಳಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ. ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್ ) ಸಂಘಟನೆಯನ್ನು ರಾಜ್ಯ ಸರ್ಕಾರ ನಿಷೇಧ ಮಾಡಬೇಕು. ಆನಗೋಳದ ಕೆರೆಯ ಪಕ್ಕದಲ್ಲಿರುವ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಸುರಕ್ಷೆ ನೀಡಬೇಕೆಂದು ಇಲ್ಲಿನ ಜನರು ಹೇಳಿದ್ದಾರೆ. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.

ಪ್ರಜಾಪ್ರಭುತ್ವದಲ್ಲಿ ಅನ್ಯಾಯವಾದಾಗ ಪ್ರತಿಭಟನೆ ನಡೆಸುವುದು ಸಾಮಾನ್ಯ. ಕನ್ನಡ ಸಂಘಟನೆಗಳ ಪ್ರತಿಭಟನೆಗಳಿಗೆ ಸರ್ಕಾರ ಅವಕಾಶ ಕಲ್ಪಿಸಿಕೊಡಬೇಕಿತ್ತು. ಆದರೆ ಎಂಇಎಸ್ ನವರು ಪುಂಡರು.‌ ಅವರಿಗೆ ಕಾನೂನು ಬಗ್ಗೆ  ಗೌರವ ಇಲ್ಲ ಏನೂ ಇಲ್ಲ. ಅಂಥವರ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕು ಎಂದ ಒತ್ತಾಯಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಕಿಡಿಗೇಡಿಗಳಿಗೆ ಪೊಲೀಸರ ಬಗ್ಗೆ ಭಯ ಇಲ್ಲದಂತಾಗಿದೆ ಎಂದು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com