ಜನಸೇವೆಯೇ ನಮ್ಮ ಧ್ಯೇಯ: ಡಿ.ಕೆ.ಶಿವಕುಮಾರ್

ಕರ್ನಾಟಕದಲ್ಲಿ ಕಾಂಗ್ರೆಸ್ ಅಲೆ ಇದ್ದು, ಪಕ್ಷವನ್ನು ಬಲಪಡಿಸಲು ಪ್ರತಿಯೊಬ್ಬ ಕಾರ್ಯಕರ್ತರು ಒಗ್ಗೂಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್

ಮಡಿಕೇರಿ: ಕರ್ನಾಟಕದಲ್ಲಿ ಕಾಂಗ್ರೆಸ್ ಅಲೆ ಇದ್ದು, ಪಕ್ಷವನ್ನು ಬಲಪಡಿಸಲು ಪ್ರತಿಯೊಬ್ಬ ಕಾರ್ಯಕರ್ತರು ಒಗ್ಗೂಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಮಡಿಕೇರಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿರುವ ಅವರು, ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವುದರಿಂದ ಬೆಂಗಳೂರು ಮತ್ತು ಇತರ ಜಿಲ್ಲೆಗಳು ಮತ್ತು ತಮಿಳುನಾಡಿನ ನೀರಿನ ಬಿಕ್ಕಟ್ಟು ಪರಿಹಾರವಾಗುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ರಾಜ್ಯದ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಮತ್ತು ಜನರ ಸೇವೆಯೇ ಅದರ ಧ್ಯೇಯವಾಗಿದೆ. ಮೇಕೆದಾಟು ಅಣೆಕಟ್ಟು ಯೋಜನೆ ಪ್ರಾರಂಭಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆಗೆ ತಲಕಾವೇರಿಯಿಂದ ನಾಂದಿ ಹಾಡಲಾಗಿದೆ. ಕಾವೇರಿ ಆಶೀರ್ವಾದದಿಂದ ನಮ್ಮ ಹೋರಾಟ ಸಫಲವಾಗುವ ನಂಬಿಕೆಯಿದೆ. ಜನವರಿ 9 ರಿಂದ 19ರವರೆಗೆ ನಡೆಯುವ ಪಾದಯಾತ್ರೆಯಲ್ಲಿ ಕೊಡಗಿನ ಕಾಂಗ್ರೆಸ್ಸಿಗರೂ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ ಅವರು ಇದೊಂದು ಇತಿಹಾಸ ನಿರ್ಮಿಸುವ ಪಾದಯಾತ್ರೆಯಾಗಲಿದೆ ಎಂದು ತಿಳಿಸಿದರು.

ಅಲ್ಲದೆ, ಮೇಕೆದಾಟು ಜಲಾಶಯವು ಕರ್ನಾಟಕದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ವರ್ಷ, ರಾಜ್ಯದಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ ಮತ್ತು ಮೇಕೆದಾಟು ಯೋಜನೆ ಪೂರ್ಣಗೊಂಡಿದ್ದರೆ ಸುಮಾರು 64 ಟಿಎಂಸಿ ಅಡಿ ನೀರನ್ನು ಭವಿಷ್ಯದ ಬಳಕೆಗಾಗಿ ಸಂಗ್ರಹಿಸಬಹುದಿತ್ತು. ಯೋಜನೆಗೆ ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ... ಪರಿಸರ ಅನುಮತಿ ಮಾತ್ರ ಬಾಕಿ ಇದೆ. ಕಾಮಗಾರಿ ಆರಂಭಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ. ನಮ್ಮ ಹೋರಾಟ ರಾಜಕೀಯ ರಹಿತವಾದುದು. ಪಾದಯಾತ್ರೆಯಲ್ಲಿ ಭಾಗವಹಿಸುವವರಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com