ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಆರ್ಭಟ, ಮಂಕಾದ ಬಿಜೆಪಿ, ಎರಡಂಕಿಯಲ್ಲಿ ಜೆಡಿಎಸ್
ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಜೆಡಿಎಸ್ ಕೂಡ ಗಮನಾರ್ಹ ಸಾಧನೆ ಮಾಡಿದೆ.
Published: 30th December 2021 02:28 PM | Last Updated: 30th December 2021 05:04 PM | A+A A-

ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು
ಬೆಂಗಳೂರು: ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಜೆಡಿಎಸ್ ಕೂಡ ಗಮನಾರ್ಹ ಸಾಧನೆ ಮಾಡಿದೆ.
ಇದನ್ನೂ ಓದಿ: ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರವಿಂದ್ ಬೆಲ್ಲದ್ ರಾಜೀನಾಮೆ?: ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ
ಪಟ್ಟಣ ಪಂಚಾಯಿತಿಯ ಒಟ್ಟು 577 ಸ್ಥಾನಗಳ ಪೈಕಿ ಕಾಂಗ್ರೆಸ್ 236 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ 194 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ. ಜೆಡಿಎಸ್ ಪಕ್ಷ 12 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.
ಇದನ್ನೂ ಓದಿ: ಸ್ವಕ್ಷೇತ್ರ ಹಾವೇರಿಯಲ್ಲೇ ಸಿಎಂ ಬೊಮ್ಮಾಯಿಗೆ ಹಿನ್ನಡೆ; ಕಾಂಗ್ರೆಸ್ ಕಮಾಲ್, ಬಂಕಾಪುರ, ಗುತ್ತಲ ಪಟ್ಟಣ ಪಂಚಾಯಿತಿ ಕೈ ತೆಕ್ಕೆಗೆ
ಇನ್ನು ಪುರಸಭೆಯ ಒಟ್ಟು 441 ಸ್ಥಾನಗಳ ಪೈಕಿ ಕಾಂಗ್ರೆಸ್ 201 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ 176 ಸ್ಥಾನಗಳಲ್ಲಿ ಜಯಗಳಿಸಿದ್ದರೆ ಜೆಡಿಎಸ್ 43 ಸ್ಥಾನಗಳನ್ನು ಗಳಿಸಿಕೊಂಡಿದೆ.
ಆದರೆ ನಗರಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಒಟ್ಟು 166 ಸ್ಥಾನಗಳ ಪೈಕಿ ಕಾಂಗ್ರೆಸ್ 61 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಬಿಜೆಪಿ 67 ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ 12 ಮತ್ತು ಇತರರು 26 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.