2023 ವಿಧಾನಸಭೆ ಚುನಾವಣೆ: ಹಳೆ ಮೈಸೂರು ಒಕ್ಕಲಿಗ ಭದ್ರಕೋಟೆ; ಕಾಂಗ್ರೆಸ್-ಜೆಡಿಎಸ್ ನಡುವೆ ಪ್ರಾಬಲ್ಯಕ್ಕೆ ತಿಕ್ಕಾಟ

2023ರ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 14 ತಿಂಗಳು. ಒಕ್ಕಲಿಗರು ಹೆಚ್ಚು ಪ್ರಭಾವ ಇರುವ ಹಳೆ ಮೈಸೂರು ಕ್ಷೇತ್ರದಲ್ಲಿ ಪ್ರಾಬಲ್ಯ ಮೆರೆಯಲು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮದೇ ರೀತಿಯಲ್ಲಿ ತಯಾರಿ ಮಾಡಿಕೊಳ್ಳುತ್ತಿವೆ. 
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 14 ತಿಂಗಳು. ಒಕ್ಕಲಿಗರು ಹೆಚ್ಚು ಪ್ರಭಾವ ಇರುವ ಹಳೆ ಮೈಸೂರು ಕ್ಷೇತ್ರದಲ್ಲಿ ಪ್ರಾಬಲ್ಯ ಮೆರೆಯಲು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮದೇ ರೀತಿಯಲ್ಲಿ ತಯಾರಿ ಮಾಡಿಕೊಳ್ಳುತ್ತಿವೆ. 

ಈ ಭಾಗದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಿಂದ ಪಿತೂರಿ ನಡೆಯುತ್ತಿದೆ ಎಂದು ಗ್ರಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮತ್ತು ಅವರ ಕುಟುಂಬದವರನ್ನು ಎದುರಿಸುವ ಶಕ್ತಿ ತಮಗಿಲ್ಲ ಎಂದು ವ್ಯಂಗ್ಯಭರಿತರಾಗಿ ಹೇಳಿದ್ದಾರೆ.

ಇತ್ತೀಚಿನ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಕಾಂಗ್ರೆಸ್ ಗೆ ಬಲ ತುಂಬಿಸಿದೆ. ಹಾಸನ ಹೊರತುಪಡಿಸಿ ಒಕ್ಕಲಿಗರ ಪ್ರಭಾವವಿರುವ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. 

ಈ ಹೊತ್ತಿನಲ್ಲಿ ಒಕ್ಕಲಿಗರ ಪ್ರೀತಿ, ವಿಶ್ವಾಸವನ್ನು ಮತ್ತಷ್ಟು ಗಳಿಸಲು ಮೇಕೆದಾಟು ನೀರಾವರಿ ಯೋಜನೆ ಜಾರಿಗೆ ಪಾದಯಾತ್ರೆಯನ್ನು ಕೈಗೊಳ್ಳುವ ನಿರ್ಧಾರದಲ್ಲಿ ಡಿ ಕೆ ಶಿವಕುಮಾರ್ ಅವರಿದ್ದಾರೆ. ಹಾಸನ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಪ್ರವಾಸ ಮಾಡಿ ಬಂದು ಪ್ರತಿಪಕ್ಷಗಳಿಗೆ ಸಂದೇಶ ರವಾನಿಸಲು ನೋಡುತ್ತಿದ್ದಾರೆ.

ಇನ್ನು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಮೇಕೆದಾಟು ವಿಷಯಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ್ದಾರೆ. ತಮ್ಮ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರ ಸರ್ಕಾರಕ್ಕೆ ಮೇಕೆದಾಟುವಿನ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಲಾಗಿತ್ತು. 

ತಮಿಳು ನಾಡು ಸುಪ್ರೀಂ ಕೋರ್ಟ್ ಮೊರೆ ಹೋದಾಗ, ನೆರೆಯ ರಾಜ್ಯದ ಮನವೊಲಿಸುವಂತೆ ಕೇಂದ್ರ ಕರ್ನಾಟಕವನ್ನು ಕೋರಿತ್ತು. ಈ ಪಾದಯಾತ್ರೆಗೆ ಕೇಂದ್ರ ಜಲ ಆಯೋಗದಿಂದ ಅನುಮತಿ ಸಿಕ್ಕಿದೆಯೇ?ಬಿಜೆಪಿ ಸರ್ವಪಕ್ಷ ನಿಯೋಗವನ್ನು ತೆಗೆದುಕೊಂಡು ಕೇಂದ್ರ ಸರ್ಕಾರದ ಮುಂದೆ ಹೋಗಲಿ ಎಂದು ಕಾಂಗ್ರೆಸ್ ಒತ್ತಾಯ ಮಾಡಲಿ ನೋಡೋಣ, ನಾವು ಅವರ ಜೊತೆ ಸೇರುತ್ತೇವೆ ಎಂದು ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದಾರೆ.

ಪಾದಯಾತ್ರೆ ನಡೆಸಲು ಕಾಂಗ್ರೆಸ್ ಗೆ ಯಾವುದೇ ನೈತಿಕತೆಯಿಲ್ಲ, ವಿಸ್ತೃತ ಯೋಜನಾ ವರದಿಯಲ್ಲಿ ತಿಳಿಸಿದಂತೆ 64 ಟಿಎಂಸಿ ಅಡಿ ನೀರಿಗೆ ಬದಲಾಗಿ 9 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡುವ ಬೇಡಿಕೆಯನ್ನು ಕರ್ನಾಟಕಕ್ಕೆ ನಿರಾಕರಿಸಲಾಗಿದೆ. ಮೇಕೆದಾಟು ವಿಚಾರದಲ್ಲಿ ಡಿ ಕೆ ಶಿವಕುಮಾರ್ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com