ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಎಂ.ಕೆ ಹುಬ್ಬಳ್ಳಿ ಪಕ್ಷೇತರರ ಕಮಾಲ್, ಎಲ್ಲ 14 ವಾರ್ಡ್ ಗಳಲ್ಲಿ ಜಯ
ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣ ಪಂಚಾಯತ್ ನ ಎಲ್ಲ 14 ವಾರ್ಡ್ ಗಳಲ್ಲಿಯೂ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ತೀವ್ರ ಹಿನ್ನಡೆಯನ್ನುಂಟು ಮಾಡಿದ್ಜಾರೆ.
Published: 30th December 2021 11:06 AM | Last Updated: 30th December 2021 11:06 AM | A+A A-

ಸಂಗ್ರಹ ಚಿತ್ರ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿ ಪಟ್ಟಣ ಪಂಚಾಯತ್ ನ ಎಲ್ಲ 14 ವಾರ್ಡ್ ಗಳಲ್ಲಿಯೂ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ತೀವ್ರ ಹಿನ್ನಡೆಯನ್ನುಂಟು ಮಾಡಿದ್ಜಾರೆ.
ಹೌದು.. ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಹಲವು ಕಡೆಗಳಲ್ಲಿ ಅಚ್ಚರಿ ಫಲಿಂತಾಶಗಳು ಹೊರಬರುತ್ತಿವೆ. ಎಂ.ಕೆ ಹುಬ್ಬಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಹದಿನಾಲ್ಕು ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ.
ಒಟ್ಟು 14 ವಾರ್ಡ್ ಗಳ ಪೈಕಿ ಮೂರು ಜನ ಅವಿರೋಧವಾಗಿ ಆಯ್ಕೆಯಾಗಿದ್ದರು. 11 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಇದೀಗ 11 ವಾರ್ಡ್ ಗಳ ಫಲಿತಾಂಶ ಪ್ರಕಟವಾಗಿದ್ದು, ಎಲ್ಲ 11 ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ.
ಆ ಮೂಲಕ ಈ ಭಾಗದ ಜನ ರಾಜಕೀಯ ಪಕ್ಷಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ.