ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಆಲಮೇಲ, ಭಟ್ಕಳ ಪ.ಪಂ. ಚುನಾವಣಾ ಫಲಿತಾಂಶ ಅತಂತ್ರ

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣ ಮತ್ತು ಉತ್ತರಕನ್ನಡ ಜಿಲ್ಲೆ ಭಟ್ಕಳ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಯಾವ ರಾಜಕೀಯ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಿಜಯಪುರ: ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣ ಮತ್ತು ಉತ್ತರಕನ್ನಡ ಜಿಲ್ಲೆ ಭಟ್ಕಳ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಯಾವ ರಾಜಕೀಯ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರವಾಗಿದೆ.

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣ ಪಂಚಾಯಿತಿ ಚುನಾವಣಾ ಫಲಿತಾಂಶ ಅತಂತ್ರವಾಗಿದೆ. ಒಟ್ಟು 19 ಸ್ಥಾನಗಳ ಪೈಕಿ ಬಿಜೆಪಿ 9, ಕಾಂಗ್ರೆಸ್ 7, ಇತರೆ 3 ವಾರ್ಡ್‌ನಲ್ಲಿ ಗೆಲುವು ಸಾಧಿಸಿದೆ. 

ಅಂತೆಯೇ ಬಿಜೆಪಿ ಶಾಸಕ ಆನಂದ ಮಾಮನಿ ಪ್ರತಿನಿಧಿಸುವ ಕ್ಷೇತ್ರ ಮುನವಳ್ಳಿ ಪುರಸಭೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಒಟ್ಟು 23 ವಾರ್ಡ್ ಗಳ ಪೈಕಿ ಕಾಂಗ್ರೆಸ್- 10, ಬಿಜೆಪಿ- 10, ಜೆಡಿಎಸ್ –1, ಪಕ್ಷೇತರ- 2 ಸ್ಥಾನ ಬಂದಿದೆ. 

ಭಟ್ಕಳದಲ್ಲೂ ಅತಂತ್ರ
ಇನ್ನು ಉತ್ತರಕನ್ನಡ ಜಿಲ್ಲೆ ಭಟ್ಕಳದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಟ್ಕಳ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ 4, ಬಿಜೆಪಿ 3, ಪಕ್ಷೇತರರು 5ರಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಇಲ್ಲಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com