ನಾಳೆ ದೆಹಲಿಗೆ ಸಿದ್ದರಾಮಯ್ಯ, ರಾಹುಲ್ ಗಾಂಧಿ ಭೇಟಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Published: 15th February 2021 06:47 PM  |   Last Updated: 15th February 2021 06:47 PM   |  A+A-


siddaramaiah

ಸಿದ್ದರಾಮಯ್ಯ

Posted By : Lingaraj Badiger
Source : UNI

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ ಸಂಜೆ 4 ಗಂಟೆಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಭೇಟಿ ನಿಗದಿಯಾಗಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷವಾಗಿ ತೆಗೆದುಕೊಳ್ಳಬಹುದಾದ ನಿರ್ಣಯಗಳ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಕೈಗೊಳ್ಳಬಹುದಾದ ಹೋರಾಟಗಳ ಕುರಿತು ಚರ್ಚಿಸಲಿರುವ ಸಿದ್ದರಾಮಯ್ಯ, ನಾಳೆ ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಲಿದ್ದು, ಬುಧವಾರ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Stay up to date on all the latest ರಾಜಕೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp