ಸ್ಥಳೀಯ ಚುನಾವಣೆಗೆ ಭರ್ಜರಿ ಸಿದ್ಧತೆ: ಸರಣಿ ರ್ಯಾಲಿಯಲ್ಲಿ ಸಿದ್ದರಾಮಯ್ಯ ಭಾಗಿ

ರಾಜ್ಯದಲ್ಲಿ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಿಗೆ ಭರ್ಜರಿ ಸಿದ್ಧತೆಗಳನ್ನು ನಡೆಸಲು ಮುಂದಾಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಪಕ್ಷದ ಬಲ ಹೆಚ್ಚಿಸಲು ಸರಣಿ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

Published: 19th February 2021 08:39 AM  |   Last Updated: 19th February 2021 11:13 AM   |  A+A-


siddaramaiah

ಸಿದ್ದರಾಮಯ್ಯ

Posted By : Manjula VN
Source : The New Indian Express

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಿಗೆ ಭರ್ಜರಿ ಸಿದ್ಧತೆಗಳನ್ನು ನಡೆಸಲು ಮುಂದಾಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಪಕ್ಷದ ಬಲ ಹೆಚ್ಚಿಸಲು ಸರಣಿ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಾ.21ರಂದು ಕಲಬುರಗಿಯಲ್ಲಿ ಕುರುಬ ಸಮುದಾಯದ ಉಪ ಪಂಗಡಗಳಾದ ಗೊಂಡ, ರಾಜಗೊಂಡ ಜೊತೆಗೆ ಕೋಳಿ ಸಮಾಜದವರನ್ನು ಒಳಗೊಂಡ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶವನ್ನು ಸಿದ್ದರಾಮಯ್ಯ ಅವರ ಆಪ್ತರು ಆಯೋಜನೆಗೊಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಈ ಬೃಹತ್ ಸಮಾವೇಶ ನಡೆದ ಕೆಲವೇ ದಿನಗಳಲ್ಲಿ ಕಲಬುರಗಿಯಲ್ಲಿ ಕುರುಬ ಸಮಾದಾಯದವರು ಸೇರಿದಂತೆ ಹಿಂದುಳಿದ ಜಾತಿಗಳಿಗೆ ಸೇರಿದ ನೂತನ ಗ್ರಾಮಪಂಚಾಯತಿ ಸದಸ್ಯರ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ ಕುರುಬ ಸಮುದಾಯವನ್ನು ಎಸ್'ಟಿಗೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯಿಂದ ಸಿದ್ದರಾಮಯ್ಯ ಅವರು ದೂರ ಉಳಿದಿದ್ದರು. ಇದರಿಂದ ಸಾಕಷ್ಟು ಟೀಕೆಗಳೂ ವ್ಯಕ್ತವಾಗಿದ್ದವು. ಇದೀಗ ಸರಣಿ ರ್ಯಾಲಿ, ಸಮಾವೇಶಗಳ ಮೂಲಕ ಸಮುದಾಯದ ಬೆಂಬಲವನ್ನು ಮರಳಿ ಪಡೆಯಲು ಸಿದ್ದರಾಮಯ್ಯ ಅವರು ಯತ್ನ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ಈ ಹಿಂದೆ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಿ ಪಕ್ಷದ ಕೇಂದ್ರೀಯ ನಾಯಕರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಸಮಾವೇಶ ನಡೆಸುವ ಕುರಿತು ಮಾತುಕತೆ ನಡೆಸಿದ್ದರು ಎಂದು ಹೇಳಲಾಗುತ್ತಿದ್ದು, ಮಾತುಕತೆಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಸರಣಿ ರ್ಯಾಲಿ ಹಾಗೂ ಸಮಾವೇಶಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.


Stay up to date on all the latest ರಾಜಕೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp