ಕಾಂಗ್ರೆಸ್‍ನ ಬಿ ಟೀಂನಂತೆ ವರ್ತಿಸುತ್ತಿರುವ ಯತ್ನಾಳ್ ರಾಜೀನಾಮೆ ನೀಡಿ ಗೆದ್ದು ಬರಲಿ: ನಿರಾಣಿ ಸವಾಲು

ಕಾಂಗ್ರೆಸ್‍ನ ಬಿ ಟೀಮ್‍ನಂತೆ ಕೆಲಸ ಮಾಡುತ್ತಿರುವ ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ತಾಕತ್ತಿದ್ದರೆ, ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರ ಶಾಸಕನಾಗಿ...

Published: 22nd February 2021 07:41 PM  |   Last Updated: 22nd February 2021 07:41 PM   |  A+A-


Murugesh_Nirani1

ಮುರುಗೇಶ್ ನಿರಾಣಿ

Posted By : Lingaraj Badiger
Source : UNI

ಬೆಂಗಳೂರು: ಕಾಂಗ್ರೆಸ್‍ನ ಬಿ ಟೀಮ್‍ನಂತೆ ಕೆಲಸ ಮಾಡುತ್ತಿರುವ ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ತಾಕತ್ತಿದ್ದರೆ, ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರ ಶಾಸಕನಾಗಿ ಗೆದ್ದು ಬರಲಿ ಎಂದು ಸಚಿವ ಮುರುಗೇಶ್.ಆರ್ ನಿರಾಣಿ ಅವರು ಸೋಮವಾರ ಬಹಿರಂಗ ಸವಾಲು ಹಾಕಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಚಿವ ಸಿ.ಸಿ ಪಾಟೀಲ್ ಹಾಗೂ ಪಂಚಮಸಾಲಿ ಶಾಸಕರ ಜೊತೆ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ನಾವು ರಾಜೀನಾಮೆ ಕೊಡಬೇಕು ಎಂದು ಹೇಳುವ ಮೊದಲು ನಿಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ವತಂತ್ರವಾಗಿ ಗೆದ್ದು ನಾಯಕತ್ವ ಸಾಬೀತುಪಡಿಸಿ ಎಂದು ಸಾವಲೆಸೆದರು.

ಯತ್ನಾಳ್ ಕಳೆದ ಚುನಾವಣೆಯಲ್ಲಿ ಗೆದ್ದು ಬಂದಿದ್ದೇ ಯಡಿಯೂರಪ್ಪನವರ ಆಶೀರ್ವಾದಿಂದ. ವಿಧಾನಪರಿಷತ್ ಚುನಾವಣೆ ವೇಳೆ ಅವಳಿ ಜಿಲ್ಲೆಯಲ್ಲಿ ಯಾರ್ಯಾರ ಕೈ ಕಾಲು ಹಿಡಿದು ಗೆದ್ದು ಬಂದೀರಿ ಎಂಬುದನ್ನು ಬಹಿರಂಗ ಪಡಿಸಬೇಕಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡರು.

ಯತ್ನಾಳ್‌ ಒಬ್ಬರಲ್ಲ, ಒಬ್ಬರ ಮೇಲೆ ನಿರಂತರ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. ಬೇರೆ ಪಕ್ಷಕ್ಕಿಂತ ನಮ್ಮ ಪಕ್ಷದವರ ಮೇಲೆ ಆರೋಪ ಮಾಡುತ್ತಾ ಬಂದಿದ್ದಾರೆ. ಕಾಂಗ್ರೆಸ್ ನ ಬಿ ‌ಟೀಂ ಆಗಿ ಯತ್ನಾಳ್‌ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ
ಮುರುಗೇಶ್‌ ನಿರಾಣಿ ಆರೋಪಿಸಿದರು.

ಜಯ ಮೃತ್ಯುಂಜಯ ಸ್ವಾಮೀಜಿಗಳೇ ಯತ್ನಾಳ್ ಹಾಗೂ ವಿಜಯಾನಂದ ಕಾಶಪ್ಪನವರ್ ಮಾತು ಕೇಳಬೇಡಿ, ಮುಂದೆ ನೀವೇ ಇದಕ್ಕೆ ಜವಾಬ್ದಾರಿ ಆಗುತ್ತೀರಿ. ಹಿಂದುಳಿದ ವರ್ಗಗಳ ಆಯೋಗದ ವರದಿ ಬರುವ ತನಕ ಕಾಯಬೇಕು, ಈಗಲೇ ಆಗಬೇಕು ಎಂದು ಪಟ್ಟು ಹಿಡಿಯುವುದು ಸರಿಯಲ್ಲ. ಸಮಾಜಕ್ಕೆ 2ಎ ಮೀಸಲಾತಿ ಸಿಗದಿದ್ದರೆ ಬಸನಗೌಡ ಪಾಟೀಲ್‌ ಯತ್ನಾಳ್ ಹಾಗೂ ವಿಜಯಾನಂದ ಕಾಶಪ್ಪನವರ್ ಹೊಣೆಯಾಗುತ್ತಾರೆ ಎಂದರು.

Stay up to date on all the latest ರಾಜಕೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp