ಮೇಯರ್ ಚುನಾವಣೆ: ಸೋಲಿನ ಬಳಿಕ ಅಪಮಾನ ತಾಳದೆ ರಾಜೀನಾಮೆಗೆ ಮುಂದಾದ ಸುನಂದಾ, ಬಿಜೆಪಿಗೆ ಶಾಕ್

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದ ಪಾಲಿಕೆ ಸದಸ್ಯೆ ಸುನಂದಾ ಪಾಲನೇತ್ರ ಅವರು ಸೋಲಿನ ಬಳಿಕ ಮನನೊಂದು ಪಾಲಿಕೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಬಿಜೆಪಿಗೆ ಶಾಕ್ ನೀಡಿದ್ದಾರೆ.

Published: 25th February 2021 12:43 PM  |   Last Updated: 25th February 2021 12:59 PM   |  A+A-


sunanda

ಸುನಂದಾ ಪಾಲನೇತ್ರ

Posted By : Lingaraj Badiger
Source : UNI

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದ ಪಾಲಿಕೆ ಸದಸ್ಯೆ ಸುನಂದಾ ಪಾಲನೇತ್ರ ಅವರು ಸೋಲಿನ ಬಳಿಕ ಮನನೊಂದು ಪಾಲಿಕೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಬಿಜೆಪಿಗೆ ಶಾಕ್ ನೀಡಿದ್ದಾರೆ.

ಬುಧವಾರ ಬಿಜೆಪಿ ಮೇಯರ್ ಅಭ್ಯರ್ಥಿ ಸುನಂದಾ ಮೇಯರ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿ ಪತ್ರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರವರಿಗೆ ರವಾನಿಸಿದ್ದಾರೆ.

ಈ ಬಾರಿ ಪ್ರಬಲ ಮೇಯರ್ ಆಕಾಂಕ್ಷಿಯಾಗಿದ್ದ ಸುನಂದ ಪಾಲನೇತ್ರ ಮೇಯರ್ ಮಾಡಲು ಮುಖ್ಯಮಂತ್ರಿ ಸಹ ಅಖಾಡಕ್ಕಿಳಿದಿದ್ದರು. ಕ್ಷೇತ್ರದಲ್ಲಿನ ರಾಜಕಾರಣಕ್ಕೆ ಮನನೊಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದ ಅವರು, ಚುನಾವಣೆಯಲ್ಲಿ ಸೋಲಿನ ನಂತರ ಬೇಸರ ಉಂಟಾಗಿದೆ ಎಂದಿದ್ದಾರೆ.

ಚುನಾವಣೆಯಲ್ಲಿ ಸೋತ ನಂತರವು ನನಗೆ ಪಾಲಿಕೆ ಸದಸ್ಯೆಯಾಗಿ ಕರ್ತವ್ಯ ನಿರ್ವಹಿಸಲು ಮಾನಸಿಕ ಹಿಂಸೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೆ ತಮಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದ್ದು, ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ.

ಸುನಂದಾ ಪಾಲನೇತ್ರ ಅವರು ಮೈಸೂರಿನ ವಾರ್ಡ್ ನಂ 59ರಿಂದ ಪಾಲಿಕೆ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.

Stay up to date on all the latest ರಾಜಕೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp