ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಪ್ರಬಲ ಅಭ್ಯರ್ಥಿಗಳು ಕಣಕ್ಕೆ: ಎಚ್.ಡಿ ಕುಮಾರಸ್ವಾಮಿ

ಮುಂಬರುವ ಮಸ್ಕಿ, ಬಸವ ಕಲ್ಯಾಣ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಜೆಡಿ ಎಸ್ ನಿಂದ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

Published: 25th February 2021 02:09 PM  |   Last Updated: 25th February 2021 02:27 PM   |  A+A-


HD Kumara swamy

ಎಚ್.ಡಿ ಕುಮಾರಸ್ವಾಮಿ

Posted By : Shilpa D
Source : The New Indian Express

ಕಲಬುರಗಿ: ಮುಂಬರುವ ಮಸ್ಕಿ, ಬಸವ ಕಲ್ಯಾಣ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಜೆಡಿ ಎಸ್ ನಿಂದ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು  ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ನಿರ್ಧರಿಸಿದ್ದರು, ಆದರೆ ಪಕ್ಷದ ಕಾರ್ಯಕರ್ತರ ಒತ್ತದಿಂದಾಗಿ ಈ ಯೋಚನೆಯನ್ನು ಪುನರ್ ಪರಿಶೀಲಿಸಿ ಸಮರ್ಥ ಅಭ್ಯರ್ಥಿಗಳನನ್ನು ಕಣಕ್ಕಿಳಿಸುವುದಾಗಿ ತಿಳಿಸಿದ್ದಾರೆ. 

ಬಿಜೆಪಿ ಹಾಗೂ ಕಾಂಗ್ರೆಸ್ ನೊಂದಿಗೆ ಚುನಾವಣೆಯನ್ನು ಸಮಾನ ಹೋರಾಟ ನಡೆಸಲಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

ಹೈದರಾಬಾದ್ ಕರ್ನಾಟಕ ‌ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಿಸಿದರೆ ಸಾಲದು. ಅಭಿವೃದ್ಧಿಗೆ ಹಣವನ್ನೂ ನೀಡಬೇಕು. ಆದರೆ ದುರದೃಷ್ಟವಶಾತ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಿದ್ದಾರೆ. 

ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೊಂದಾಣಿಕೆ ಸಂಬಂಧ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅದು ಸ್ಥಳೀಯ ನಾಯಕರುಗಳ ನಡುವಿನ ಹೊಂದಾಣಿಕೆ ಎಂದು ಹೇಳಿದ್ದಾರೆ.
 

Stay up to date on all the latest ರಾಜಕೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp