ಬಸವಕಲ್ಯಾಣ ಉಪಚುನಾವಣೆ: ಲಕ್ಷ್ಮಣ ಸವದಿ, ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕೆ!

ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

Published: 26th February 2021 10:40 AM  |   Last Updated: 26th February 2021 01:02 PM   |  A+A-


Laxman savadi

ಲಕ್ಷ್ಮಣ ಸವದಿ

Posted By : Shilpa D
Source : The New Indian Express

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

18 ಟಿಕೆಟ್ ಆಕಾಂಕ್ಷಿಗಳ ಜೊತೆ ನಾವು ಸಭೆ ನಡೆಸಿದೆವು, ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಶುಕ್ರವಾರದಿಂದ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಪ್ರಚಾರ ಕಾರ್ಯದ ಉಸ್ತುವಾರಿಯೂ ಆಗಿರುವ ಲಕ್ಷ್ಮಣ ಸವದಿ ಹೇಳಿದ್ದಾರೆ, ಚುನಾವಣಾ ದಿನಾಂಕ ಪ್ರಕಟಿಸುವ ಮೊದಲೇ ಕ್ಷೇತ್ರದ ಎಲ್ಲಾ ಮತದಾರರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.

18 ಆಕಾಂಕ್ಷಿಗಳಲ್ಲಿ ಒಬ್ಬರಿಗೆ ಟಿಕೆಟ್ ನೀಡಲಾಗುವುದು, ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು, ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. 

ಚುನಾವಣಾ ದಿನಾಂಕ ಪ್ರಕಟವಾದ ನಂತರ ಪಕ್ಷ ಅಭ್ಯರ್ಥಿಗಳ ಪಟ್ಟಿ ಮಾಡಿ ಬಿಜೆಪಿ ಹೈಕಮಾಂಡ್ ಗೆ ರವಾನಿಸಲಿದೆ ಎಂದು ಸವದಿ ಹೇಳಿದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಈ ಕ್ಷೇತ್ರವನ್ನು ಕಳೆದು ಕೊಂಡಿತ್ತು, ಉಪ ಚುನಾವಣೆಯಲ್ಲಿ ನಮ್ಮ ಗೆಲುವು ಖಚಿತ ಎಂದು ಸವದಿ ತಿಳಿಸಿದ್ದಾರೆ.

Stay up to date on all the latest ರಾಜಕೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp