ಬಿಜೆಪಿ ಶಾಸಕರ ಗಂಭೀರ ಆರೋಪಗಳ ಕುರಿತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಬೇಕು: ಯುಟಿ ಖಾದರ್

ಸಂಪುಟ ವಿಸ್ತರಣೆ ಕುರಿತು ಸ್ವಪಕ್ಷದವರೇ ಗಂಭೀರ ಆರೋಪ  ಮಾಡುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಬೇಕೆಂದು ಕಾಂಗ್ರೆಸ್ ನಾಯಕ ಯುಟಿ ಖಾದರ್ ಅವರು ಗುರುವಾರ ಆಗ್ರಹಿಸಿದ್ದಾರೆ. 

Published: 15th January 2021 07:32 AM  |   Last Updated: 15th January 2021 12:14 PM   |  A+A-


UT Khader

ಕಾಂಗ್ರೆಸ್ ನಾಯಕ ಯುಟಿ ಖಾದರ್

Posted By : Manjula VN
Source : The New Indian Express

ಮಂಗಳೂರು: ಸಂಪುಟ ವಿಸ್ತರಣೆ ಕುರಿತು ಸ್ವಪಕ್ಷದವರೇ ಗಂಭೀರ ಆರೋಪ  ಮಾಡುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಬೇಕೆಂದು ಕಾಂಗ್ರೆಸ್ ನಾಯಕ ಯುಟಿ ಖಾದರ್ ಅವರು ಗುರುವಾರ ಆಗ್ರಹಿಸಿದ್ದಾರೆ. 

ಬಿಜೆಪಿ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಯಡಿಯೂರಪ್ಪ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ, ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ಕೆಲವರು ಸೀಕ್ರೆಟ್ ಸಿಡಿಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. 

ಈ ಕುರಿತು ಕೂಡಲೇ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು. ಪ್ರಧಾನಮಂತ್ರಿಗಳಿಗೆ ಯಾರಾದರೂ ಅವಮಾನಿಸಿದರೆ, ಅದು ರಾಷ್ಟ್ರವಿರೋಧಿ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿಗಳಿಗೆ ಅವಮಾನಿಸಿದರೆ, ಅದು ರಾಷ್ಟ್ರವಿರೋಧವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. 

Stay up to date on all the latest ರಾಜಕೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp